ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ರಂದು ಉಡುಪಿಯಲ್ಲಿ ಸ್ವಾಭಿಮಾನ ನಡಿಗೆ

Last Updated 20 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಅವರು ದಲಿತರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ದಲಿತ–ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಅ.23ರಂದು ಉಡುಪಿಯಲ್ಲಿ ‘ಸ್ವಾಭಿಮಾನ ನಡಿಗೆ’ ಹಮ್ಮಿಕೊಂಡಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಬಿ.ಆರ್. ಭಾಸ್ಕರ್ ಪ್ರಸಾದ್, ‘ಚಲೋ ಉಡುಪಿ ಜಾಥದಿಂದ ಉಡುಪಿ ಮಲಿನಗೊಂಡಿದೆ. ಅದನ್ನು ಶುದ್ಧೀಕರಿಸೋಣ ಬನ್ನಿ ಎಂದು ಹೇಳಿಕೆ ನೀಡಿರುವ ಸೂಲಿಬೆಲೆ ಅವರು ಅಸ್ಪೃಶ್ಯತೆ ಆಚರಣೆಗೆ ಮುಂದಾಗಿದ್ದಾರೆ’ ಎಂದು ದೂರಿದರು.

‘ಚಲೋ ಉಡುಪಿಗೆ ವಿರುದ್ಧವಾಗಿ ಸೂಲಿಬೆಲೆ ಅವರು ಕನಕ ನಡೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಉಡುಪಿಯ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪಿ.ವಿಲಾಸ್ ನಾಯಕ್‌ ಬೆಂಬಲ ನೀಡಿದ್ದಾರೆ’ ಎಂದು ದೂರಿದರು.

‘ಗೋಸಂರಕ್ಷಣೆಯ ಹೆಸರಿನಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಬೇಕು. ರಾಜ್ಯದಲ್ಲಿ ಭೂರಹಿತರಿಗೆ ಸರ್ಕಾರ ಕನಿಷ್ಠ ಐದು ಎಕರೆ ಜಮೀನು ನೀಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT