ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಸಂಘಟನೆಗಳ ನಾಶಕ್ಕೆ ಹಿಂಜರಿಕೆ ಇಲ್ಲ: ಅಮೆರಿಕ

ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನೆ
Last Updated 23 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ :  ವಿವಿಧ ಉಗ್ರ ಸಂಘಟನೆಗಳ ಜಾಲವನ್ನು ನಾಶಪಡಿಸಲು ಏಕಾಂಗಿಯಾಗಿ ದಾಳಿ ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಅಮೆರಿಕ  ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಪ್ರಭಾವಿ ಗುಪ್ತಚರ ಸಂಸ್ಥೆ  ಐಎಸ್‌ಐ ಎಲ್ಲಾ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸದ ಕಾರಣ ಇಂತಹ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ.

‘ಎಲ್ಲಾ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಐಎಸ್‌ಐ ಕ್ರಮ ಕೈಗೊಳ್ಳುತ್ತಿಲ್ಲ, ಕೆಲವು ಗುಂಪುಗಳ ವಿರುದ್ಧ ಮಾತ್ರವೇ ಕ್ರಮ ಕೈಗೊಳ್ಳುತ್ತಿದೆ’ ಎಂದು ಉಗ್ರ ಚಟುವಟಿಕೆಗೆ ಹಣ  ಹೂಡಿಕೆ ನಿಯಂತ್ರಿಸುವ ಇಲಾಖೆಯ ಅಧೀನ ಕಾರ್ಯದರ್ಶಿ ಅದಮ್‌ ಸಝುಬಿನ್‌ ಅವರು ಹೇಳಿದ್ದಾರೆ.

‘ಪಾಕಿಸ್ತಾನದಲ್ಲಿ ಕಾರ್ಯನಿ ರ್ವಹಿಸುತ್ತಿರುವ ಎಲ್ಲ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ. ಈ ವಿಚಾರದಲ್ಲಿ ಪಾಕಿಸ್ತಾನಕ್ಕೆ ನೆರವು ನೀಡಲು ಸಿದ್ಧರಿದ್ದೇವೆ’ ಎಂದಿದ್ದಾರೆ.

ಶಾಲೆ, ಮಾರುಕಟ್ಟೆ ಪ್ರದೇಶ ಮತ್ತು ಮಸೀದಿಗಳ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನಿಯರೇ ಬಲಿಯಾಗಿದ್ದಾರೆ. ದುರದೃಷ್ಟವಶಾತ್‌ ದಾಳಿ ನಡೆಯುವ ಸ್ಥಳದ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ವಾಯವ್ಯ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಾಶಪಡಿಸುವಲ್ಲಿ ಪಾಕಿಸ್ತಾನ ಸಫಲವಾಗಿದೆ. ಆದರೆ ಉಗ್ರರ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ಐಎಸ್‌ಐ ಮುಂದುವರಿಸಿದೆ ಎಂದು ಹೇಳಿದ್ದಾರೆ. ಹಖ್ಖಾನಿ ಜಾಲದ ಉಗ್ರರು ಆಫ್ಘಾನಿಸ್ತಾನದ ಗಡಿಯಲ್ಲಿ ದಾಳಿ ನಡೆಸುವುದನ್ನು ತಡೆಯಲು ಪಾಕಿಸ್ತಾನ ಇನ್ನೂ ಸಾಕಷ್ಟು ಒತ್ತಡ ಹೇರಬೇಕಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT