ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಷೆಲ್‌ ವಿರುದ್ಧ ಟ್ರಂಪ್‌ ವಾಗ್ದಾಳಿ

Last Updated 23 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಫೆಚರ್‌, ಅಮೆರಿಕ : ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಅವರು ಇದೇ ಮೊದಲ ಸಲ ಅಮೆರಿಕದ ಪ್ರಥಮ ಮಹಿಳೆ ಮಿಷೆಲ್‌ ಒಬಾಮ ವಿರುದ್ಧ ವಾಗ್ದಾಳಿ ನಡೆಸಿದರು.

ದಕ್ಷಿಣ ಕೆರೊಲಿನಾದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಚುನಾವಣಾ ರ್‍್ಯಾಲಿಯಲ್ಲಿ ಮಾತನಾಡಿದ ಟ್ರಂಪ್‌, ಮಿಷೆಲ್‌ ಅವರು ಈ ಹಿಂದೆ ಹಿಲರಿಯನ್ನು ಟೀಕಿಸಿದ್ದನ್ನು ನೆನಪಿಸಿದರು.

‘ಒಂದೊಮ್ಮೆ ಹಿಲರಿಯನ್ನು ಟೀಕಿಸಿದ್ದ ಮಿಶೆಲ್‌ ಈಗ ಅವರನ್ನು ಬಹುವಾಗಿ ಪ್ರೀತಿಸುತ್ತಾರೆ. ಅವರ ಪರ ಚುನಾವಣಾ ಪ್ರಚಾರ ನಡೆಸಲು ಬಯಸುತ್ತಾರೆ’ ಎಂದು ಟ್ರಂಪ್‌ ಹೇಳಿದರು.

2008ರ ಚುನಾವಣೆ ಸಂದರ್ಭದಲ್ಲಿ ತಮ್ಮ ಪತಿ ಒಬಾಮ ವಿರುದ್ಧ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಿಲರಿಯನ್ನು ‘ನೀವು ಕುಟುಂಬದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ, ದೇಶದ ಆಡಳಿತವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ’ ಎಂದು ಮಿಷೆಲ್‌ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT