ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್ ವಿರುದ್ಧದ ಇನ್ನೆರಡು ಏಕದಿನ ಪಂದ್ಯಗಳಿಗೂ ರೈನಾ ಇಲ್ಲ

Last Updated 24 ಅಕ್ಟೋಬರ್ 2016, 14:52 IST
ಅಕ್ಷರ ಗಾತ್ರ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಿಗೂ ಸುರೇಶ್ ರೈನಾ ಅಲಭ್ಯವಾಗಲಿದ್ದಾರೆ. ಜ್ವರದಿಂದ ಬಳಲುತ್ತಿರುವ ಅವರನ್ನು ಧರ್ಮಶಾಲಾದಲ್ಲಿ ನಡೆದಿದ್ದ ಮೊದಲ ಪಂದ್ಯದಿಂದಲೂ ಕೈಬಿಡಲಾಗಿತ್ತು.

ಅ. 20ರಂದು ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಮತ್ತು ಅ. 23ರಂದು ಮೊಹಾಲಿಯಲ್ಲಿ ನಡೆದ ಮೂರನೇ ಪಂದ್ಯದಲ್ಲೂ ಭಾಗಿಯಾಗಿರಲಿಲ್ಲ.

ಮುಂಬರುವ ಎರಡು ಪಂದ್ಯಗಳಲ್ಲಿಯೂ ಈಗಿರುವ 14 ಮಂದಿಯ ತಂಡವನ್ನೇ ಉಳಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಸೋಮವಾರ ಹೇಳಿದೆ.

ರೈನಾ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಮುಂದಿನ ಪಂದ್ಯಗಳಲ್ಲಿ ಅವರಿರುವುದಿಲ್ಲ ಎಂದು ಬಿಸಿಸಿಐ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ 2 -1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT