ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.5 ಲಕ್ಷ ನಿರಾಶ್ರಿತರಿಗೆ ಶಿಬಿರ: ವಿಶ್ವಸಂಸ್ಥೆ

Last Updated 24 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಅಮ್ಮಾನ್‌ : ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರರ ವಶದಲ್ಲಿರುವ ಮೋಸುಲ್‌ ನಗರದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಸುಮಾರು 1.5 ಲಕ್ಷ ಇರಾಕಿಗಳು ನಿರಾಶ್ರಿತರಾಗಲಿದ್ದಾರೆ. 

ಅವರಿಗಾಗಿ ಇರಾಕ್‌ನಲ್ಲಿ ಇನ್ನು ಎರಡು ಮೂರು ದಿನಗಳಲ್ಲಿ 30 ಸಾವಿರ ಶಿಬಿರಗಳನ್ನು ಸಿದ್ಧಪಡಿಸಲಾಗುವುದು ಎಂದು ವಿಶ್ವಸಂಸ್ಥೆ ನಿರಾಶ್ರಿತರ ವಿಭಾಗದ ಮುಖ್ಯಸ್ಥ ಫಿಲಿಪ್ಪೊ ಗ್ರಾಂಡಿ ತಿಳಿಸಿದ್ದಾರೆ.

ತೀವ್ರ ಪ್ರತಿರೋಧ: ಮೋಸುಲ್‌ನಲ್ಲಿ ಐಎಸ್‌ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಇರಾಕ್‌ ಪಡೆಗಳಿಗೆ ಜಿಹಾದಿಗಳಿಂದ ಸೋಮವಾರ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಮೋಸುಲ್‌ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಹಿಡಿತ ಕಳೆದುಕೊಂಡಿರುವ ಜಿಹಾದಿಗಳು ಈಗ ಇರಾಕ್‌ ಸೇನಾಪಡೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT