ಕರಾಚಿ: ಪಾಕಿಸ್ತಾನದ ಖ್ವೆಟ್ಟಾ ನಗರದಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರು ಸೋಮವಾರ ಇಡೀ ರಾತ್ರಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, 60 ಮಂದಿ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಸಾವಿಗೀಡಾಗಿದ್ದಾರೆ. ಮೂವರು ಉಗ್ರರನ್ನು ಹೊಡೆದುರಿಳಿಸಲಾಗಿದೆ. 118 ಜನ ಗಾಯಗೊಂಡಿದ್ದಾರೆ.

ಬಲೂಚಿಸ್ತಾನ ಪ್ರಾಂತ್ಯದ ಸರ್ಯಬ ರಸ್ತೆಯಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಸೋಮವಾರ ರಾತ್ರಿ 11.10ಕ್ಕೆ ಉಗ್ರರು ದಾಳಿ ಆರಂಭಿಸಿದ್ದಾರೆ. ಪಾಕಿಸ್ತಾನ ಭದ್ರತಾ ಪಡೆ ಸಿಬ್ಬಂದಿ ಪ್ರತಿ ದಾಳಿ ನಡೆಸಿ ನೂರಾರು ಪ್ರಶಿಕ್ಷಣಾರ್ಥಿಗಳನ್ನು ರಕ್ಷಿಸಿದ್ದಾರೆ. ಉಗ್ರರು ಹಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದು, ಭದ್ರತಾಪಡೆ ವಸತಿ ನಿಲಯವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಗ್ರರು ನಡೆಸಿದ ದಾಳಿಯಲ್ಲಿ 60 ಮಂದಿ ಸಾವಿಗೀಡಾಗಿದ್ದಾರೆ, 115 ಜನ ಗಾಯಗೊಂಡಿದ್ದಾರೆ ಎಂದು ಭದ್ರತಾಪಡೆ ಮೂಲಗಳು ತಿಳಿಸಿವೆ.
ಘಟನೆಯಲ್ಲಿ 118 ಮಂದಿ ಗಾಯಗೊಂಡಿದ್ದಾರೆ ಎಂದು ಬಲೂಚಿಸ್ತಾನ ಪ್ರಾಂತ್ಯದ ಗೃಹ ಸಚಿವ ಬಿ. ಸರ್ಫರಾಜ್ ಟ್ವೀಟ್ ಮಾಡಿದ್ದಾರೆ.

ಭದ್ರತಾಪಡೆ ನಡೆಸಿದ ಪ್ರತಿ ದಾಳಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಐದರಿಂದ ಆರು ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಅವರು ಈ ಮೊದಲು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದ 700 ತರಬೇತಿ ನಿರತ ಕೆಡೆಟ್‌ಗಳು ವಸತಿ ನಿಲಯದಲ್ಲಿ ತಂಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.