ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಐದುನೂರು, ಸಾವಿರ ಮುಖ ಬೆಲೆ ನೋಟುಗಳಿಗೆ ಬೆಂಕಿ

Last Updated 10 ನವೆಂಬರ್ 2016, 7:44 IST
ಅಕ್ಷರ ಗಾತ್ರ

ಬರೇಲಿ: ಕಪ್ಪುಹಣ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಚಲಾವಣೆ ರದ್ಧುಗೊಳಿಸಿರುವ ಐದುನೂರು ಹಾಗೂ ಸಾವಿರ ಮುಖ ಬೆಲೆಯ ನೋಟುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ.

ಮೂಟೆಗಟ್ಟಲೆ ಹಣಕ್ಕೆ ಬೆಂಕಿ ಹಚ್ಚಿರುವುದರಿಂದ ಬರೇಲಿ ಹೊರವಲಯದಲ್ಲಿ ಗಾಢ ಹೊಗೆ ಆವರಿಸಿದೆ.

ಘಟನೆಯು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವುದರಿಂದಾಗಿ ಈ ಪ್ರಮಾಣದ ಹಣವನ್ನು ಚುನಾವಣಾ ಸಂದರ್ಭದಲ್ಲಿ ಅಕ್ರಮವಾಗಿ ಬಳಸುವ ಯೋಚನೆ ಮಾಡಿಕೊಂಡಿದ್ದರು, ಆದರೆ ಐದುನೂರು ಹಾಗೂ ಸಾವಿರ ಮುಖಬೆಲೆಯ ನೋಟುಗಳ ಚಲಾವಣೆ ರದ್ಧುಗೊಳಿಸಿದ ನಂತರ ಬೇಸರಗೊಂಡು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ನಿಖರ ಕಾರಣ ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT