ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದೋರ್‌–ಪಾಟ್ನಾ ರೈಲು ದುರಂತ; ಸಾವಿನ ಸಂಖ್ಯೆ 100ಕ್ಕೆ ಏರಿಕೆ

Last Updated 20 ನವೆಂಬರ್ 2016, 9:34 IST
ಅಕ್ಷರ ಗಾತ್ರ

ಉತ್ತರ ಪ್ರದೇಶ: ರೈಲು ದುರಂತದಲ್ಲಿ 100 ಮಂದಿ ಸಾವಿಗೀಡಾಗಿದ್ದು, 220ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇಂದೋರ್‌ನಿಂದ ಪಾಟ್ನಾಗೆ ತೆರಳುತ್ತಿದ್ದ ರೈಲು ಉತ್ತರ ಪ್ರದೇಶದ ಪುಖರಾಯನ್‌ ಸಮೀಪ ಹಳಿ ತಪ್ಪಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಬೆಳಗಿನ ಜಾವ 3:10ರ ಸುಮಾರಿಗೆ ಅಪಘಾತ ನಡೆದಿದೆ. 14 ಬೋಗಿಗಳಿದ್ದ ರೈಲು ಪಾಟ್ನಾ ಕಡೆಗೆ ಸಂಚರಿಸುತ್ತಿತ್ತು.

ದುರಂತರದಲ್ಲಿ ಮೃತರಾದವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ರೈಲ್ವೆ ಸಚಿವ ಸುರೇಶ್‌ ಪ್ರಭು ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 3.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 30 ಆಂಬುಲೆನ್ಸ್‌, 250ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ರೈಲು ಹಳಿ ತಪ್ಪಲು ನಿಖರ ಕಾರಣ ತಿಳಿದು ಬಂದಿಲ್ಲ.

ರೈಲ್ವೆ ಸಚಿವಾಲಯ ಸಹಾಯವಾಣಿ ಸಂಖ್ಯೆ ಪ್ರಕಟಿಸಿದೆ. ಸಹಾಯವಾಣಿ: 07411072, 07342560906, 074121072, 051621072, 05101072, 05113270239

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT