ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಜಾ ಮಾಡಲಿ

Last Updated 4 ಡಿಸೆಂಬರ್ 2016, 19:30 IST
ಅಕ್ಷರ ಗಾತ್ರ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹ 2000 ಮುಖಬೆಲೆಯ ಭಾರಿ ಪ್ರಮಾಣದ ನೋಟುಗಳು ಹಾಗೂ ಚಿನ್ನವನ್ನು  ಅಧಿಕಾರಿಗಳಿಂದ  ಆದಾಯ ತೆರಿಗೆ ಇಲಾಖೆಯವರು ವಶಪಡಿಸಿಕೊಂಡಿರುವುದು ಸ್ತುತ್ಯರ್ಹ. ಬ್ಯಾಂಕ್ ಅಧಿಕಾರಿಗಳು ಆಮಿಷಕ್ಕೆ ಬಲಿಯಾಗಿ ಕಪ್ಪುಹಣವನ್ನು ಬಿಳುಪು ಮಾಡಿರುವುದು ಅಕ್ಷಮ್ಯ.

ಕೆಲವು ಬ್ಯಾಂಕ್ ಅಧಿಕಾರಿಗಳನ್ನು ಈ ಸಂಬಂಧ ಅಮಾನತಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಈ ಅಧಿಕಾರಿಗಳು ಮುಂದೊಂದು ದಿನ ಮತ್ತೆ ಕೆಲಸಕ್ಕೆ ಹಾಜರಾಗುತ್ತಾರೆ. ವಿಚಾರಣೆ ಸಂದರ್ಭದಲ್ಲಿ ಹಣ ಮತ್ತು ರಾಜಕೀಯ ಪ್ರಭಾವ ಬಳಸಿ, ತಾವು ತಪ್ಪಿತಸ್ಥರಲ್ಲ ಎಂದು ಸಾಬೀತು ಮಾಡಿಕೊಳ್ಳುವುದಕ್ಕೆ ಅವರಿಗೆ ಯಾವ ಕಷ್ಟವೂ ಆಗುವುದಿಲ್ಲ. ಹೀಗಾಗಿ ಕೂಡಲೇ ವಿಚಾರಣೆ ನಡೆಸಿ, ಎಲ್ಲ ತಪ್ಪಿತಸ್ಥರನ್ನೂ ತಕ್ಷಣ ವಜಾ ಮಾಡಬೇಕು.
-ಕೆ.ವಿ.ಸೀತಾರಾಮಯ್ಯ, ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT