ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಹುದ್ದೆಗಳ ನೇಮಕಾತಿ 17 ಕೇಂದ್ರಗಳಲ್ಲಿ ಪರೀಕ್ಷೆ ಸುಗಮ

Last Updated 4 ಡಿಸೆಂಬರ್ 2016, 20:17 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌) ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಗರ ಸೇರಿದಂತೆ ರಾಜ್ಯದಾದ್ಯಂತ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.

‘ನಗರದ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 13,900 ಅಭ್ಯರ್ಥಿಗಳು ಹಾಜರಾದರು. 398 ಹುದ್ದೆಗಳ ನೇಮಕಕ್ಕಾಗಿ ಈ ಪರೀಕ್ಷೆ ನಡೆಸಲಾಯಿತು’ ಎಂದು ನೇಮಕಾತಿ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದರು.

‘ಅಭ್ಯರ್ಥಿಗಳು ಬೆಳಿಗ್ಗೆ 10ರಿಂದ 11.30ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ 3.30ರವರೆಗೆ ಎರಡನೇ ಪತ್ರಿಕೆ ಪ್ರಶ್ನೆಗಳಿಗೆ ಉತ್ತರಿಸಿದರು. ಜತೆಗೆ ಮೈಸೂರು, ಕಲಬುರ್ಗಿ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿ ನಡೆದಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT