ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ಬದಲಾವಣೆ: ಇಬ್ಬರು ಬ್ಯಾಂಕ್‌ ವ್ಯವಸ್ಥಾಪಕರ ಬಂಧನ

Last Updated 5 ಡಿಸೆಂಬರ್ 2016, 9:38 IST
ಅಕ್ಷರ ಗಾತ್ರ

ನವದೆಹಲಿ: ಹಳೆ ನೋಟುಗಳ ಅಕ್ರಮ ಬದಲಾವಣೆ ಸಂಬಂಧ ಆಕ್ಸಿಸ್‌ ಬ್ಯಾಂಕ್‌ನ ಇಬ್ಬರು ವ್ಯಸ್ಥಾಪಕರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯ(ಇಡಿ), 3 ಕೆ.ಜಿ. ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಇಬ್ಬರ ವಿರುದ್ಧ ನ. 30ರಂದು ಅಪರಾಧ ಪ್ರಕರಣ ದಾಖಲಿಸಿದೆ.

ನಗದು ಹಾಗೂ ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಮಾಡಿದ ಪ್ರಕರಣ ಇದಾಗಿದೆ. ಆಕ್ಸಿಸ್‌ ಬ್ಯಾಂಕ್‌ನ ಕಾಶ್ಮೀರ್‌ ಗೇಟ್‌ ಶಾಖೆಯ ಶೊಬಿತ್‌ ಸಿನ್ಹಾ ಮತ್ತು ವಿನೀತ್ ಗುಪ್ತಾ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಭಾನುವಾರ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಪ್ರತಿಷ್ಠಿತ ಬ್ಯಾಂಕ್‌ನ ಅಧಿಕಾರಿಗಳನ್ನು ಬಂಧಿಸಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.
ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಆಕ್ಸಿಸ್‌ ಬ್ಯಾಂಕ್‌ ಈ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT