ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಲು ಮನವಿ

Last Updated 5 ಡಿಸೆಂಬರ್ 2016, 9:42 IST
ಅಕ್ಷರ ಗಾತ್ರ

ರಾಮನಗರ: ‘ಇಂದಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಅಂಕ ತೆಗೆಯುವ ಯಂತ್ರಗಳಂತೆ ಭಾವಿಸುತ್ತಿರುವುದರಿಂದ ಮಕ್ಕಳಲ್ಲಿನ ಆತ್ಮಸ್ಥೈರ್ಯ ಕುಂಠಿತಗೊಂಡು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ' ಎಂದು ವೀರಶೈವ ಮಹಾಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ಎಸ್. ಸಚ್ಚಿದಾನಂದಮೂರ್ತಿ ಬೇಸರ ವ್ಯಕ್ತಪಡಿಸಿದರು.

ನಗರದ ಪಟೇಲ್‌ ನರ್ಸಿಂಗ್‌ ಕಾಲೇಜಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೇವೂರು ಮಠದ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಅಧಿಕಾರ ಶಾಶ್ವತವಲ್ಲ, ನಾವು ನಂಬಿರುವ ಮೌಲ್ಯ, ಸಿದ್ಧಾಂತ ಹಾಗೂ ತತ್ವಗಳ ಮೇಲಿನ ಬದ್ಧತೆಯಿಂದ ಸಮಾಜದಲ್ಲಿ ಉತ್ತಮ ನೆಲೆ ಕಂಡುಕೊಳ್ಳಬಹುದು ಎಂದರು.

ಕುಡಿನೀರು ಕಟ್ಟೆಯ ವಿರಕ್ತ ಮಠದ ಶಿವರುದ್ರ ಸ್ವಾಮೀಜಿ ಮಾತನಾಡಿ 'ಅನ್ನದಾನಕ್ಕಿಂತ ವಿದ್ಯಾದಾನ ಶ್ರೇಷ್ಠದಾನವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವಂತಹ ಪ್ರತಿಭಾ ಪುರಸ್ಕಾರ, ಸಾರ್ವಜನಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮ ಸಮಾಜದಲ್ಲಿ ನಿರಂತರವಾಗಿ ನಡೆಯುತ್ತಿರಬೇಕು' ಎಂದರು. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಬೆಂಗಳೂರಿನ ಎಸ್‌ಪಿಎಸ್‌ ಸಂಸ್ಕೃತ ಕಾಲೇಜಿನ ಪ್ರಾಚಾರ್ಯ ವಿದ್ವಾನ್‌ ಚಂದ್ರಶೇಖರಯ್ಯ, ನಗರಸಭೆ ಮಾಜಿ ಸದಸ್ಯ ಎ.ಜೆ. ಸುರೇಶ್‌, ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಕಿರಣ್‌, ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್‌, ವೀರಶೈವ ಮಹಾಸಭಾದ ಯುವ ಘಟಕದ ಅಧ್ಯಕ್ಷ ಎ.ಎಸ್.ಶಿವಕುಮಾರ್‌, ಪ್ರಧಾನ ಕಾರ್ಯದರ್ಶಿ ಪಾಪಣ್ಣ, ಉಪಾಧ್ಯಕ್ಷ ಪಿ. ಶಿವಾನಂದ, ಖಜಾಂಚಿ ಶಿವಕುಮಾರ್‌, ಕಾರ್ಯದರ್ಶಿ ಗಂಗಾಧರಯ್ಯ, ತಾಲ್ಲೂಕು ಘಟಕದ ಅಧ್ಯಕ್ಷರಾದ ಗುರುಮಾದಯ್ಯ, ಕೈಲಾಷ್‌, ಎಲ್‌.ಶಿವಸ್ವಾಮಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT