ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಥಿಲ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

Last Updated 5 ಡಿಸೆಂಬರ್ 2016, 10:32 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಹೆಗ್ಗವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿಯೊಂದು ಶಿಥಿಲ ಸ್ಥಿತಿ ತಲುಪಿದ್ದು, ವಿದ್ಯಾರ್ಥಿಗಳು ಆತಂಕದಲ್ಲಿ ಪಾಠ ಕೇಳುವಂತಾಗಿದೆ.

ಶಾಲೆಯಲ್ಲಿ 1ರಿಂದ 5ರವರೆಗೆ ತರಗತಿಗಳಿವೆ. 46 ಮಕ್ಕಳು ಕಲಿಯುತ್ತಿ ದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಸಮಸ್ಯೆ ಇದೆ ಎಂಬುದು ಶಿಕ್ಷಕರ ಅಭಿಪ್ರಾಯ.

ಶಿಥಿಲ ಸ್ಥಿತಿ ತಲುಪಿರುವ ಕೊಠಡಿಯ ಒಂದು ಭಾಗದಲ್ಲಿ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದೆ. ಹೆಂಚುಗಳು ಕಳಚಿ ಬಿದ್ದಿವೆ. ಸೂರ್ಯರಶ್ಮಿ ತರಗತಿಒಳಗೆ ಬೀಳುವಷ್ಟು ಅಸ್ತವ್ಯಸ್ತ ಸ್ಥಿತಿ ಇದೆ.

ಮಳೆ ಸುರಿದಾಗ ಕೊಠಡಿ ಒಳಗೂ ನೀರು ಸೋರುತ್ತದೆ. ಗೋಡೆ ಕುಸಿಯುವ ಸಂಭವವಿದ್ದು, ಈ ಸ್ಥಿತಿಯಲ್ಲಿಯೇ ವಿದ್ಯಾರ್ಥಿಗಳು ಪಾಠ ಕೇಳುವಂತಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೂ ಶಾಲೆಗೆ ಭೇಟಿ ನೀಡಿದ್ದು, ಪರಿಸ್ಥಿತಿ ಗಮನಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ.

ಶಾಲೆಗೆ ಹೊಸದಾಗಿ ಕೊಠಡಿ ನಿರ್ಮಿಸಿ, ವಿದ್ಯಾರ್ಥಿಗಳು ಸುಗಮ ವಾತಾವರಣದಲ್ಲಿ ಕಲಿಯಲು ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT