ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ 'ಟೈಮ್ 2016ನೇ ಸಾಲಿನ ವರ್ಷದ ವ್ಯಕ್ತಿ'

Last Updated 5 ಡಿಸೆಂಬರ್ 2016, 14:51 IST
ಅಕ್ಷರ ಗಾತ್ರ

ನವದೆಹಲಿ: ಪ್ರಭಾವಿ ನಿಯತಕಾಲಿಕ ಟೈಮ್‌ ನಡೆಸುತ್ತಿರುವ '2016ನೇ ಸಾಲಿನ ವರ್ಷದ ವ್ಯಕ್ತಿ' ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಷದ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಟೈಮ್ ನಿಯತಕಾಲಿಕ ಓದುಗರ ಮತಗಳನ್ನು ಆಧರಿಸಿ ಈ ಗೌರವ ನೀಡಲಾಗುತ್ತಿದೆ.

ಅಮೆರಿಕದ ಅಧ್ಯಕ್ಷಗಾದಿಯಿಂದ ನಿರ್ಗಮಿತ ಅಧ್ಯಕ್ಷ ಬರಾಕ್ ಒಬಾಮ, ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿಕಿಲೀಕ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜ್ ಮೊದಲಾದ ಘಟಾನುಘಟಿ ನಾಯಕರನ್ನು ಹಿಂದಿಕ್ಕಿ ಮೋದಿ ಗೆಲುವು ಸಾಧಿಸಿದ್ದಾರೆ.

ಈ ಸಮೀಕ್ಷೆಯಲ್ಲಿ ಮೋದಿಯವರು ಶೇ. 18 ಮತಗಳನ್ನು ಗಳಿಸಿದ್ದಾರೆ.

ಅದೇ ವೇಳೆ ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜೂಕರ್‍ಬರ್ಗ್ (ಶೇ.2) ಮತ್ತು ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಿಲರಿ ಕ್ಲಿಂಟನ್(ಶೇ.4) ಮತಗಳಿಸಿದ್ದಾರೆ ಎಂದು ಟೈಮ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT