ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲಬರ್ಗಾ ವಿ.ವಿ. ಗ್ರಂಥಾಲಯದಲ್ಲಿ ಬೆಂಕಿ

ಸಿಸಿಟಿವಿ ಕ್ಯಾಮೆರಾದಲ್ಲಿ ವ್ಯಕ್ತಿಯ ಚಲನವಲನ ಸೆರೆ
Last Updated 7 ಡಿಸೆಂಬರ್ 2016, 6:55 IST
ಅಕ್ಷರ ಗಾತ್ರ

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿದ್ದು, ನಾಲ್ಕನೆಯ ಮಹಡಿಯಲ್ಲಿದ್ದ ಪುಸ್ತಕಗಳೆಲ್ಲ ಸುಟ್ಟು ಕರಕಲಾಗಿವೆ.

ಮಧ್ಯರಾತ್ರಿಯಿಂದಲೆ ಬೆಂಕಿ ಹೊತ್ತಿಕೊಂಡಿದ್ದು ಬೆಳಿಗ್ಗೆ 8ಕ್ಕೆ ವಿಶ್ವವಿದ್ಯಾಲಯದ ಪೊಲೀಸ್ ಠಾಣೆ ಮೂಲಕ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾ ಆರಂಭಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಘಟನೆಯಲ್ಲಿ ಸಂಶೋಧನಾ ಗ್ರಂಥಗಳು, ಸಂಗ್ರಹ ನಿಯತಕಾಲಿಕೆಗಳು ಹಾಗೂ ಪೀಠೋಪಕರಣಗಳು ಸುಟ್ಟಿವೆ.

ಗ್ರಂಥಾಲಯದ ಎಲ್ಲ ಮಹಡಿಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಮಂಗಳವಾರ ಮಧ್ಯರಾತ್ರಿಯಲ್ಲಿ ವ್ಯಕ್ತಿಯೊಬ್ಬ ಗ್ರಂಥಾಲಯದಲ್ಲಿ ಓಡಾಡಿದ ದೃಶ್ಯಗಳು ಸೆರೆಯಾಗಿವೆ. ಪೊಲೀಸರು ಈ ಎಲ್ಲವನ್ನು ಪರಿಶೀಲಿಸುತ್ತಿದ್ದಾರೆ ಎಂದು ವಿ.ವಿ.ಯ ಗ್ರಂಥಾಲಯದ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT