ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್‌ನಲ್ಲಿ ಪ್ರವಾಸಿಗರು ಸುರಕ್ಷಿತ: ರಾಜನಾಥ್‌ ಸಿಂಗ್‌

Last Updated 8 ಡಿಸೆಂಬರ್ 2016, 5:59 IST
ಅಕ್ಷರ ಗಾತ್ರ

ನವದೆಹಲಿ: ಅಂಡಮಾನ್‌ನ ಹೈವ್‌ಲಾಕ್‌ ಮತ್ತು ನೀಲ್‌ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿ ಭಾರಿ ಗಾಳಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಅವರನ್ನು ಮರಳಿ ಕರೆತರಲು ಎಲ್ಲಾ ಪ್ರಯತ್ನ ನಡೆದಿದೆ ಎಂದು ಗೃಹಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ರಾಜನಾಥ್‌ ಅವರು ಅಂಡಮಾನ್‌ ಮತ್ತು ನಿಕೋಬಾರ್‌ ಧ್ವೀಪದ ಗವರ್ನರ್‌ ಜಗಧೀಶ್‌ ಮುಖೈ ಅವರ ಜತೆ ಮಾತನಾಡಿ, ಪರಿಸ್ಥಿತಿ ಹಾಗೂ ಪ್ರವಾಸಿಗರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಪ್ರವಾಸಿಗರ ರಕ್ಷಣೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿರುವುದಾಗಿ ಮುಖೈ ತಿಳಿಸಿದ್ದಾರೆ ಎಂದು ರಾಜನಾಥ್‌ ಹೇಳಿದ್ದಾರೆ.

ಬುಧವಾರ 1,400 ಪ್ರವಾಸಿಗರು ಧ್ವೀಪದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಸಿಗರನ್ನು ರಕ್ಷಿಸುವುದಕ್ಕಾಗಿ ನೌಕಾ ಪಡೆಯು ನಾಲ್ಕು ಹಡಗುಗಳನ್ನು ನಿಯೋಜಿಸಿದೆ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯ ಆರಂಭಿಸಲು ಸಾಧ್ಯವಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT