ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಸೇರಿ ಮೂವರ ಬಂಧನ

Last Updated 9 ಡಿಸೆಂಬರ್ 2016, 12:29 IST
ಅಕ್ಷರ ಗಾತ್ರ

ನವದೆಹಲಿ: ಆಗಸ್ಟಾ ವೆಸ್ಟ್‌ಲ್ಯಾಂಡ್ ಕಂಪೆನಿಯ ₹3,600 ಕೋಟಿ ಮೌಲ್ಯದ ಹೆಲಿಕಾಪ್ಟರ್ ಖರೀದಿ ವ್ಯವಹಾರದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಮುಖ್ಯಸ್ಥ ಎಸ್. ಪಿ. ತ್ಯಾಗಿ ಅವರು ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಿದ್ದಾರೆ.

ತ್ಯಾಗಿ ಅವರ ಸಹೋದರ ಸಂಜೀವ್ ಮತ್ತು ವಕೀಲ ಗೌತಮ್‌ ಖೇತಾನ್ ಅವರನ್ನೂ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವರ: ₹3,600 ಕೋಟಿ ಮೌಲ್ಯದ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಮತ್ತು ಇತರ 12 ಜನರ ವಿರುದ್ಧ ಸಿಬಿಐ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿತ್ತು. ತ್ಯಾಗಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತನಿಖೆಗೆ ಒಳಪಟ್ಟ, ಎಫ್‌ಐಆರ್‌ನಲ್ಲಿ ಹೆಸರು ಕಾಣಿಸಿಕೊಂಡ ಮೊದಲ ವಾಯುಪಡೆ ಮುಖ್ಯಸ್ಥರಾಗಿದ್ದಾರೆ.

ಇಟಲಿ ಮೂಲದ ಫಿನ್‌ಮೆಕಾನಿಕಾ, ಲಂಡನ್ ಮೂಲದ ಆಗಸ್ಟಾವೆಸ್ಟ್‌ಲ್ಯಾಂಡ್, ಚಂಡೀಗಡ ಮೂಲದ ಐಡಿಎಸ್ ಇಂಫೋಟೆಕ್ ಹಾಗೂ ಏರೊಮ್ಯಾಟ್ರಿಕ್ಸ್ ಕಂಪೆನಿಗಳನ್ನು ಸಹ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿತ್ತು.

2007ರಲ್ಲಿ ನಿವೃತ್ತಿ ಹೊಂದಿದ ಬಳಿಕ ಇಟಲಿಗೆ ಕೈಗೊಂಡ ಪ್ರವಾಸಕ್ಕೆ ಸಂಬಂಧಿಸಿದಂತೆ ತ್ಯಾಗಿ ಅವರನ್ನು ಸಿಬಿಐ ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT