ನವದೆಹಲಿ: ಹಳೆಯ ₹500 ಮತ್ತು ₹1000 ಮುಖಬೆಲೆಯ ನೋಟುಗಳ ರದ್ದತಿಯ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಒಟ್ಟು ₹3,300 ಕೋಟಿ ಕಪ್ಪುಆದಾಯ ಪತ್ತೆಯಾಗಿದೆ.

ನವೆಂಬರ್ 9ರ ಬಳಿಕ ದೇಶದ 734 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಈ ದಾಳಿಗಳಲ್ಲಿ ದಾಖಲೆ ಇಲ್ಲದ ಒಟ್ಟು ₹3,300 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಆಸ್ತಿ ಪತ್ತೆಯಾಗಿದೆ. ಈ ಪೈಕಿ ₹92 ಕೋಟಿ ಮೌಲ್ಯದ ಹೊಸ ನೋಟುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ದಾಳಿ ವೇಳೆ ₹500 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ₹92 ಕೋಟಿ ಮೌಲ್ಯದ ₹2000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

₹421 ಕೋಟಿಗೂ ಹೆಚ್ಚು ನಗದು ಹಾಗೂ ₹500 ಕೋಟಿ ಆಸ್ತಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 20ರವೆರೆಗೆ ಒಟ್ಟು ₹3,300 ಕೋಟಿ ಕಪ್ಪು ಆದಾಯ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಖಲೆ ಇಲ್ಲದ ಆದಾಯ ಮಾತ್ರವಲ್ಲದೆ ಬೇನಾಮಿ ಆಸ್ತಿ ಪತ್ತೆಗೂ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಪ್ಪುಆದಾಯ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.