ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾಗ್ಯಲಕ್ಷ್ಮಿ’ಗೆ ಗುರಿ ನಿಗದಿ: ಅಸಮಾಧಾನ

Last Updated 23 ಡಿಸೆಂಬರ್ 2016, 8:18 IST
ಅಕ್ಷರ ಗಾತ್ರ

ಬಳ್ಳಾರಿ: ಹೆಣ್ಣು ಮಕ್ಕಳ ಸಬಲೀಕರಣದ ಸಲುವಾಗಿಯೇ ಸರ್ಕಾರ ಜಾರಿಗೊಳಿಸಿ ರುವ ಭಾಗ್ಯಲಕ್ಷ್ಮಿ ಯೋಜನೆಗೆ ಗುರಿ ನಿಗದಿ ಮಾಡಿರುವುದು ಸರಿಯಲ್ಲ ಎಂದು ಜಿಲ್ಲಾ ಧಿಕಾರಿ ಡಾ.ರಾಮಪ್ರಸಾದ್‌ ಮನೋ ಹರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಅಡಿಯಲ್ಲಿ ನಗರದಲ್ಲಿ ನಡೆದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಈ ಸಂಗತಿ ಗಮನಕ್ಕೆ ಬರು ತ್ತಿದ್ದಂತೆಯೇ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯಲ್ಲಿ ಎಷ್ಟು ಹೆಣ್ಣುಮಕ್ಕಳು ಜನಿ ಸಿವೆ ಎಂಬುದರ ಸಂಪೂರ್ಣ ವಿವರ ಪಡೆದು ಎಲ್ಲರಿಗೂ ಭಾಗ್ಯಲಕ್ಷ್ಮಿ ಬಾಂಡ್ ಒದಗಿಸಬೇಕು. ಪರಿಶಿಷ್ಟ ಸಮುದಾಯದ ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ಹೊರಗೆ ಉಳಿಯ ದಂತೆ ಎಚ್ಚರಿಕೆ ವಹಿಸಬೇಕು ಎಂದು ಸ್ಪಷ್ಟಪಡಿಸಿದರು.

ಫಲಾನುಭವಿ ಆಧಾರಿತ ಯೋಜನೆ ಗಳಲ್ಲಿ ಪರಿಶಿಷ್ಟ ಸಮುದಾಯದವರಿಗೆ ಅವಕಾಶ ಕಲ್ಪಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸ ಬೇಕು. ಇಲ್ಲದಿದ್ದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಆಗಸ್ಟ್‌ವರೆಗೆ ಲಭ್ಯವಾದ ಬಾಂಡ್‌ ಗಳನ್ನು ವಿತರಿಸಲಾಗಿದೆ. ಯೋಜನೆ ಅಡಿ ಪ್ರತಿ ತಿಂಗಳೂ ಅರ್ಜಿ ಸಂಗ್ರಹಿಸಿ ನೋಂದಾಯಿಸಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹ್ಮದ್‌ ಸರ್ವರ್‌ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಅಂಗವಿಕಲರ ಸಮೀಕ್ಷೆ: ಜಿಲ್ಲೆಯಲ್ಲಿ ಎಷ್ಟು ಮಂದಿ ಅಂಗವಿಕಲರಿದ್ದಾರೆ ಎಂಬ ಬಗ್ಗೆ ಪೂರ್ಣ ಸಮೀಕ್ಷೆ ಮಾಡಬೇಕು. ಅವರಿಗೆ ಸೌಲಭ್ಯಗಳನ್ನು ದೊರಕಿಸುವಲ್ಲಿ ಅಂಗವಿ ಕಲರ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಅಧಿಕಾರಿ ಮಹಾಂತೇಶ, ಬಳ್ಳಾರಿ ನಗರವನ್ನು ಹೊರತುಪಡಿಸಿ ಜಿಲ್ಲೆಯಲ್ಲಿ 21,900 ಅಂಗವಿಕಲರಿದ್ದಾರೆ. ನಗರದಲ್ಲಿ ಇರುವ ಅಂಗವಿಕಲರ ಕುರಿತು ಪಾಲಿಕೆ ಸಹಯೋಗದಲ್ಲಿ ಸಮೀಕ್ಷೆ ನಡೆಸಲಾಗು ತ್ತಿದೆ. ಶೀಘ್ರದಲ್ಲೇ ಅಂಕಿ– ಅಂಶವುಳ್ಳ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಸ್ತೆ ನಿರ್ಮಾಣ: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆ ಅಡಿ ಮಂಜೂ ರಾದ ₹ 11 ಕೋಟಿ ಅನುದಾನ ದಲ್ಲಿ,  ಶಾಸಕರು ಸೂಚಿಸಿದ ಗ್ರಾಮಗಳಲ್ಲಿ ರಸ್ತೆ ನಿರ್ಮಿಸಲಾಗಿದೆ. ಅದನ್ನು ಖಚಿತ ಪಡಿಸಿಕೊಳ್ಳುವಂತೆ ಸಮಾಜಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯ ಪಾಲಕ ಎಂಜನಿಯರ್ ತಿಲಕ್‌ಕುಮಾರ್ ತಿಳಿಸಿದರು.

ಅನುದಾನ  ಬಳಸದಿದ್ದರೆ  ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ  ಎಚ್ಚರಿಕೆ
ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸದೇ ಇರುವ ಇಲಾಖೆಗಳಿಗೆ ನೋಟಿಸ್‌ ಕೊಡಿ. 15 ದಿನದೊಳಗೆ ಉತ್ತರಿಸದಿದ್ದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ಸೂಚಿಸಿದರು.

2015–16ನೇ ಸಾಲಿನಲ್ಲಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡದ ಇಲಾಖೆಗಳಿಗೆ ಕಾರಣ ಕೇಳಿ ನೋಟಿಸ್‌ ಕೊಡಬೇಕು. ಸಮಂಜಸ ಉತ್ತರ ನೀಡದಿದ್ದರೆ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳ ಉಪಯೋಜನೆ ಅಧಿನಿಯಮದ ಸೆಕ್ಷನ್‌ 12ರ ಅಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT