ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗೆ ಸೌಲಭ್ಯ ತಲುಪಿಸಿ

Last Updated 24 ಡಿಸೆಂಬರ್ 2016, 9:00 IST
ಅಕ್ಷರ ಗಾತ್ರ

ಮಡಿಕೇರಿ:  ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮೂಲಕ ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ಸಂಘಟನೆಯ ರಾಜ್ಯ ಸಂಚಾಲಕ ಬಿ.ಎಂ. ಸಂದೀಪ್ ಕರೆ ನೀಡಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಹಾಗೂ ಮೀನಾಕ್ಷಿ ಅವರ ನೇತೃತ್ವದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ವ್ಯವಸ್ಥೆಯಡಿ ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘಟನೆಯನ್ನು ಪ್ರಬಗೊಳಿಸಬೇಕು ಎಂದರು.

ಮುಂದಿನ ತಿಂಗಳಿನಲ್ಲಿ ಸಂಘಟಕರಿಗೆ ತರಬೇತಿ ಶಿಬಿರಗಳನ್ನು ನಡೆಸಲಾಗುದು. ಪ್ರತಿಯೊಬ್ಬ ಸಂಘಟಕರು ಸಂಘಟನೆಯ ಕಾರ್ಯಸೂಚಿಯಂತೆ ನಡೆದುಕೊಂಡು ಪಕ್ಷದ ಬಲ ಹೆಚ್ಚಿಸುವ ಮೂಲಕ ಸರ್ಕಾರದ  ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ತಿಳಿಸಿದರು.

ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಮಾತನಾಡಿ, ಕಳೆದ ಮೂರುವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಎಲ್ಲಾ ಪ್ರಗತಿಶೀಲ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಸೂಕ್ತವಾದ ಮಾಹಿತಿ ನೀಡಿ ಅವರಲ್ಲಿ ಜಾಗೃತಿಯನ್ನು ಮೂಡಿಸಲಾಗುದು ಎಂದರು.

ರಾಜ್ಯದಲ್ಲಿ ತಳಮಟ್ಟದಿಂದಲೇ ಸಾಮಾಜಿಕ ಆರ್ಥಿಕ ಅಭಿವೃದ್ಧಿಯೊಂದಿಗೆ ಎಲ್ಲಾ ನಾಗರೀಕರಿಗೆ ಸಮಾನವಾದ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಕೆಪಿಸಿಸಿ ಸಮಿತಿ ಮತ್ತು ಎಐಸಿಸಿ ಯ ಅಂಗ ಸಂಸ್ಥೆಯಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಂದೋಲವನ್ನು ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದರ ಜೊತೆಗೆ ಸರ್ಕಾರದ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಪ್ರಜೆಗೂ ತಲುಪುವಂತೆ ಮಾಡುವ ಜವಬ್ದಾರಿ ಸಂಘಟಕರ ಮೇಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಟಿ.ಪ್ರದೀಪ್ ಮಾತನಾಡಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲೆಯಲ್ಲಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯ ಕಾರ್ಯಗಳಿಗೆ  ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮೈಸೂರು ಪ್ರಾಂತೀಯ ಸಂಯೋಜಕ ಎಂ.ಎ. ರಂಗಸ್ವಾಮಿ, ರಾಜ್ಯ ಸಂಘಟಕ  ಪವನ್ ಗಾಂಧಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಕಾಂಗೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT