ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅಗತ್ಯ

Last Updated 28 ಡಿಸೆಂಬರ್ 2016, 6:06 IST
ಅಕ್ಷರ ಗಾತ್ರ

ಚಾಮರಾಜನಗರ: ‘ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಕ್ಷಕರ ಪೋತ್ಸಾಹ ಅಗತ್ಯ’ ಎಂದು ಸೇವಾಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮ. ವೆಂಕಟರಾಮು ಹೇಳಿದರು.
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯ 3ನೇ ದಶಮಾನೋತ್ಸವದ ಅಂಗವಾಗಿ ಮಂಗಳವಾರ ಹಮ್ಮಿ ಕೊಂಡಿದ್ದ ಸಾಮರಸ್ಯ ಸಂಭ್ರಮ–ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಪ್ರಾಚೀನ ಕಾಲ ದಿಂದಲೂ ಗುರು ಪರಂಪರೆಯಿದೆ. ಗುರುಗಳಿಗೆ ಉನ್ನತ ಸ್ಥಾನ ನೀಡಲಾಗಿದೆ. ಒಬ್ಬ ವಿದ್ಯಾರ್ಥಿಯನ್ನು ಆತನ ಸಾಮರ್ಥ್ಯಕ್ಕೆ ತಕ್ಕಂತೆ ಬೆಳೆಸಲು ಗುರುಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ಸಂಸ್ಥೆಯು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಅವರಲ್ಲಿ ಸಾಮಾಜಿಕ, ನೈತಿಕ ಹಾಗೂ ದೇಶಭಕ್ತಿ ಬೆಳೆಸುವ ಕೆಲಸ ಮಾಡುತ್ತಿದೆ. ಸಂಸ್ಥೆಯ ಆಡಳಿತ ವರ್ಗದ ಸಿಬ್ಬಂದಿ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಸಂಸ್ಥೆಯು ಸರ್ಕಾರದ ಯಾವುದೇ ಅನುದಾನ ಬಯಸದೆ ಸಮಾಜವನ್ನು ಅವಲಂಬಿಸಿ ಬೆಳೆಯುತ್ತಿದೆ. ಸಮಾಜದ ಪ್ರೇರಣೆ, ಪ್ರೋತ್ಸಾಹ, ಸಹಕಾರದಿಂದ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತದೆ. ಬಡವರು, ಮಧ್ಯಮ ವರ್ಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಸಂಸ್ಥೆಯಿಂದ ಮುಂದಿನ ದಿನಗಳಲ್ಲಿ ವಸತಿ ಶಾಲೆ, ಬಿ.ಇಡಿ ಶಿಕ್ಷಣ, ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಲಾಗಿದೆ. ಇದಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಉದ್ಯಮಿ ನಟರಾಜು ಮಾತನಾಡಿ, ಹಿಂದೆ ಮೈಸೂರು ಜಿಲ್ಲೆಯ ಒಂದು ಭಾಗವಾಗಿದ್ದ ಚಾಮರಾಜನಗರ ಶೈಕ್ಷಣಿಕ ವಾಗಿ ಹಿಂದುಳಿದಿದೆ. ಈ ಭಾಗದ ಶೈಕ್ಷಣಿಕ ಪ್ರಗತಿಗೆ ಶಿಸ್ತುಬದ್ಧ ಶಿಕ್ಷಣ ಸಂಸ್ಥೆಯ ಆವಶ್ಯಕತೆಯಿದ್ದು, ಸೇವಾ ಭಾರತಿ ಶಿಕ್ಷಣ ಸಂಸ್ಥೆ ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.

ಜಿಲ್ಲೆಯಲ್ಲಿ 30 ವರ್ಷ ಕಾಲ ಸುದೀರ್ಘವಾದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ. ಸಮಾಜಕ್ಕೆ ಉತ್ತಮ ಪ್ರಜೆ ಗಳನ್ನು ರೂಪಿಸಲು ಸಂಸ್ಥೆಯ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚಿನ ದಿನ ಗಳಲ್ಲಿ ಸ್ಪರ್ಧೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಪ್ರತಿಯೊಂದು ವಿಷಯದಲ್ಲೂ ಗುಣಮಟ್ಟದ ಶಿಕ್ಷಣ ನೀಡಬೇಕು. ಜತೆಗೆ, ಉತ್ತಮ ಶಿಕ್ಷಣ ಸಂಸ್ಥೆ ಕಟ್ಟಲು ಪ್ರಜ್ಞಾವಂತರು ಶ್ರಮಿಸ ಬೇಕು ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಲಾಯಿತು. ದೇಸಿ ಗೋ ತಳಿ ಸಾಕುತ್ತಿರುವ ಸಂಸ್ಥೆಯ ಪೋಷಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಎಂ.ಪಿ. ಮಂಜುನಾಥ್‌, ಸದಸ್ಯರಾದ ಕೆ. ಬಾಲ ಸುಬ್ರಮಣ್ಯಂ, ಎಸ್. ಬಾಲಸುಬ್ರಮಣ್ಯ, ಟ್ರಸ್ಟಿಗಳಾದ ಎಚ್.ವಿ. ಮುರುಳೀಧರ್‌, ಉದ್ಯಮಿ ಖಂಡೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT