ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದತಿಯಿಂದ ತೆರಿಗೆ ಸಂಗ್ರಹ ಹೆಚ್ಚಳ: ಸಚಿವ ಅರುಣ್‌ ಜೇಟ್ಲಿ

Last Updated 29 ಡಿಸೆಂಬರ್ 2016, 12:41 IST
ಅಕ್ಷರ ಗಾತ್ರ

ನವದೆಹಲಿ: ನವೆಂಬರ್‌ 8ರಂದು ಪ್ರಕಟಿಸಲಾದ ನೋಟು ರದ್ದತಿಯ ಪರಿಣಾಮ ಸರ್ಕಾರದ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ತಿಳಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್‌ 19ರ ವರೆಗೂ ನೇರ ತೆರಿಗೆ ಸಂಗ್ರಹದಲ್ಲಿ ಶೇ.14.4ರಷ್ಟು ಹಾಗೂ ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಶೇ.26.2ರಷ್ಟು ಏರಿಕೆಯಾಗಿದೆ ಎಂದರು.

ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಸಾಕಷ್ಟು ಪ್ರಮಾಣದಲ್ಲಿ ಹೊಸ ನೋಟುಗಳ ಸಂಗ್ರಹ ಹೊಂದಿದ್ದು, ₹500 ಮುಖ ಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ. ನೋಟು ರದ್ದತಿಯ ಲಾಭ ಈಗಾಗಲೇ ಗೋಚರಿಸುತ್ತಿದೆ. ಅಧಿಕ ಪ್ರಮಾಣದಲ್ಲಿ ಹಣ ಬ್ಯಾಂಕಿಂಗ್‌ ವ್ಯವಸ್ಥೆಯಡಿ ಬಂದಿದೆ ಎಂದು ಜೇಟ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT