ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಕ್ತ ಶೈಕ್ಷಣಿಕ ಯುಗಕ್ಕೆ ಇಂಗ್ಲಿಷ್‌ ಬೇಕಿದೆ

Last Updated 30 ಡಿಸೆಂಬರ್ 2016, 7:10 IST
ಅಕ್ಷರ ಗಾತ್ರ

ಮಂಡ್ಯ: ಬದಲಾದ ಶೈಕ್ಷಣಿಕ ವಾತಾವರಣ ಹಾಗೂ ಪ್ರಸ್ತುತ ಸ್ಪರ್ಧಾತ್ಮಕ ಯುಗಕ್ಕೆ ಒಗ್ಗಿಕೊಳ್ಳಲು ಇಂಗ್ಲಿಷ್‌ ಕಲಿಕೆ ಅನಿವಾರ್ಯವಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಎಂದು ಸಲಹೆ ನೀಡಿದರು.

ನಗರದ ಸರ್.ಬಿ. ಸಮುದಾಯದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಜಿಲ್ಲಾ ಘಟಕ)ದ ವತಿಯಿಂದ ಗುರುವಾರ ನಡೆದ ‘ಸರ್ಕಾರಿ ಶಾಲೆಗಳ ಬಲವರ್ಧನೆ, ಏಕೆ-ಹೇಗೆ ?’ ಕುರಿತ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಏಕರೂಪದ ಶಿಕ್ಷಣ ನೀತಿ ಜಾರಿ ಅನಿವಾರ್ಯವಾಗಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗೆ ಅಗತ್ಯವಾಗಿದೆ. ಇದಕ್ಕೆ ಪೂರಕವಾಗಿ ಪ್ರಸ್ತುತ ರಾಜ್ಯದಲ್ಲಿರುವ ಶಿಕ್ಷಣ ವ್ಯವಸ್ಥೆಯ ಬಗ್ಗೆ ಚಿಂತನ-ಮಂಥನ ಅಗತ್ಯವಾಗಿ ಬೇಕಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದಲ್ಲಿಯೂ ಶಿಕ್ಷಣ ನೀಡುವುದು ಅಗತ್ಯವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿ ಉನ್ನತ ಹುದ್ದೆ ತೆಗೆದುಕೊಂಡಿರಬಹುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಕಲಿಕೆ ಅನಿವಾರ್ಯ ಆಗಿದೆ ಎಂದು ತಿಳಿಸಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹೆಚ್ಚಾಗಿ ಸವಲತ್ತು ನೀಡಲಾಗುತ್ತದೆ. ಆದರೂ, ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆ ಆಗಿದೆ. ಪೋಷಕರು ಸರ್ಕಾರಿ ಶಾಲೆ ಎಂದರೆ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಲಹೆ ಮಾಡಿದರು.

ಪ್ರಾಥಮಿಕ ಶಾಲೆಯಿಂದ ಪಿಯುಸಿ ವರೆಗೂ ಸರ್ಕಾರಿ ಶಾಲೆ ಬಲವರ್ಧನೆಗೆ ಒಂದೇ ಸ್ಥಳದಲ್ಲೇ ಶಿಕ್ಷಣ ದೊರೆಯುವಂತೆ ಮಾಡಬೇಕು. ಎಲ್ಲ ಪಂಚಾಯಿತಿ ಮಟ್ಟದಲ್ಲಿ ಈ ಕೆಲಸ ಆದರೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಡ್ರಾಪ್ಔಟ್ ಕಡಿಮೆಯಾಗುತ್ತದೆ. ಅದು ವಸತಿ ಶಿಕ್ಷಣ ವ್ಯವಸ್ಥೆ ಮೂಲಕವಾದರೂ ಆಗಲೇಬೇಕು ಎಂದು ಹೇಳಿದರು.

ಶಾಸಕ ಎನ್.ಚಲುವರಾಯಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳು ಯಾವುದರಲ್ಲೂ ಕಡಿಮೆಯಿಲ್ಲ. ಆದರೂ, ಅವುಗಳ ಬಗ್ಗೆ ಜನರಿಗೆ ಆಸಕ್ತಿ ಕಡಿಮೆಯಾಗಿದೆ. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು. ಆ ಮೂಲಕ ಸರ್ಕಾರಿ ಶಾಲೆಗಳತ್ತ ಗಮನ ಸೆಳೆಯಬೇಕು ಎಂದು ಸಲಹೆ ಮಾಡಿದರು.

ಸಮಾನ ಶಿಕ್ಷಣಕ್ಕಾಗಿ ಜನಾಂದೋಲ ನದ ಸಂಚಾಲಕ ಡಾ.ಎಚ್.ವಿ. ವಾಸು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಶಿಕ್ಷಕರು, ನಿವೃತ್ತ ಶಿಕ್ಷಕರು, ಪ್ರಗತಿಪರ ರೈತರು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ. ಪ್ರೇಮಕುಮಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್‌.ಎನ್‌. ಯೋಗೇಶ್, ತಾ.ಪಂ. ಅಧ್ಯಕ್ಷ ಕೆ.ಎಂ. ಬೀರಪ್ಪ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ನೌಕರರ ಸಂಘದ ಅಧ್ಯಕ್ಷ ಕೆ. ನಾಗೇಶ್‌, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ಮಾಜಿ ಶಾಸಕರಾದ ಜಿ.ಬಿ. ಶಿವಕುಮಾರ್,  ರೈತ ಮುಖಂಡ ಕೋಣಸಾಲೆ ನರಸರಾಜು, ರೆಡ್‌ಕ್ರಾಸ್‌ ಸಂಸ್ಥೆಯ ಮೀರಾ ಶಿವ ಲಿಂಗಯ್ಯ,  ವಿ.ಎಂ. ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT