ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಹಂತದಲ್ಲೇ ಜಾನಪದ ಕಲಿಕೆ

Last Updated 31 ಡಿಸೆಂಬರ್ 2016, 6:15 IST
ಅಕ್ಷರ ಗಾತ್ರ

ಮಡಿಕೇರಿ:  ಸಾಹಿತ್ಯ, ಸಂಸ್ಕೃತಿ, ಆಚಾರ–ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ತಿಳಿಸಲು ಶಾಲಾ ಕಾಲೇಜು ಹಂತದಲ್ಲಿ ಜಾನಪದವನ್ನು ಕಲಿಕಾ ವಿಷಯವಾಗಿ ಅಳವಡಿಸಬೇಕು ಎಂದು ಬಿ.ಸಿ. ಶಂಕರಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಕಾಲೇಜು ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು.  

ದೇಶ–ವಿದೇಶಗಳಲ್ಲಿ ಸ್ಥಳೀಯ ಸಂಸ್ಕೃತಿ, ಸಾಹಿತ್ಯಗಳನ್ನು ಒಳಗೊಂಡ ಜಾನಪದ ಕಲೆಗಳು ಹೆಚ್ಚು ಪ್ರಸಿದ್ಧಿ ಪಡೆಯುತ್ತಿದೆ. ಜನಪದ ಕಲೆಗಳ ಅಧ್ಯಯನ ಕೂಡ ಅಗತ್ಯ. ಶಾಲಾ ಕಾಲೇಜು ಹಂತದಲ್ಲಿ ಕಲಿಕಾ ವಿಷಯವಾಗಿ ಜಾನಪದ ಕಲೆಗಳನ್ನು ಅಳವಡಿಸಿಕೊಳ್ಳುವುದು ಉತ್ತಮ ಎಂದರು. 

ಜಾನಪದ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಜಿಲ್ಲೆಯಲ್ಲಿಯೂ ಜಾನಪದ ಆಚಾರ ವಿಚಾರಗಳು ಪ್ರಖ್ಯಾತಿವಾಗಿವೆ. ಇಲ್ಲಿಯ ಸಂಸ್ಕೃತಿಯ ವೇಷ-ಭೂಷಣ, ನೃತ್ಯಗಳು ವಿಶಿಷ್ಟವಾಗಿದ್ದು ಇಂತಹ ಜಾನಪದ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಬೇಕು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಕಲೆ, ಸಾಹಿತ್ಯ, ಪರಂಪರೆಯನ್ನು ಉಳಿಸಿ ಬೆಳೆಸಬೇಕು.  ಕಲೆ, ಸಾಹಿತ್ಯ, ಪರಂಪರೆಗಳು ಆಡಳಿತದ ಅವಿಭಾಜ್ಯ ಅಂಗವಾಗಿದ್ದು, ಕಲೆ, ಸಂಸ್ಕೃತಿಗೆ ಒತ್ತು ನೀಡಬೇಕು ಎಂದರು. 

ಇಂದಿನ ಯುವ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಯ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಟಿವಿ, ಮೊಬೈಲ್‌ಗಳ ಬಳಕೆಗಳನ್ನು ಹೆಚ್ಚಾಗುತ್ತಿದೆ. ಇದರಿಂದ ಯುವ ಪ್ರತಿಭೆಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಪರಿಚಯಿಸಲು ಸಾದ್ಯವಿಲ್ಲ. ಅವಕಾಶ ಸಿಕ್ಕಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜಾನಪದ ಪರಿಷತ್ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಟಿ. ಅನಿಲ್ ಮಾತನಾಡಿ, ಸಾಂಸ್ಕೃತಿಕವಾಗಿ ಕೊಡಗನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕು ಎಂದರು.

ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ, ಭಾರತೀಯ ವಿದ್ಯಾಭವನ ವ್ಯವಸ್ಥಾಪಕ ಪಿ.ಪಿ. ಸೋಮಣ್ಣ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಸ್ವಾಗತಿಸಿದರು. ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ ಜಿಲ್ಲಾ ಸಂಚಾಲಕ ಇ.ರಾಜು ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಸಿ.ಎಸ್. ಪೂಣಚ್ಚ  ನಿರ್ದೆಶನದಲ್ಲಿ ಜಾಗೃತಿ ನಾಟಕ ಹಾಗೂ ಎಂ.ಎನ್. ವನಿತ್ ಕುಮಾರ್ ನಿರ್ದೇಶನ ಕುಡಿಯ ನೃತ್ಯ ಪ್ರದರ್ಶನ, ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳು ಅಮ್ಮೆಣಿಚಂಡ ಪ್ರವೀಣ್ ನಿರ್ದೇಶನದಲ್ಲಿ ಸುಂದರತಾಣ ನಾಟಕ ಹಾಗೂ ಸಿ.ಎಸ್. ಪೂಣಚ್ಚ ನಿರ್ದೇಶನದಲ್ಲಿ ಕತ್ತಿಯಾಟ್ ಪ್ರದರ್ಶಿಸಿದರು.

ಸುಂಟಿಕೊಪ್ಪ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಎಸ್‌.ಡಿ. ಸುಕನ್ಯಾ ಅವರ ನಿರ್ದೇಶನದಲ್ಲಿ ಕಫನ್ ನಾಟಕ ಹಾಗೂ ಜಯಶ್ರಿ ಎಸ್ ಅವರ ನಿರ್ದೇಶನದಲ್ಲಿ ಜಾನಪದ ನೃತ್ಯ ಹಾಗೂ ಕೂಡಿಗೆಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಬಿ. ಪ್ರಕಾಶ್ ಅವರನಿರ್ದೇಶನದ ಆಷಾಢಭೂತಿ ನಾಟಕ ಮತ್ತು ಎಂ.ಸಿ. ರಮೇಶ್ ಅವರ ನಿರ್ದೇಶನದಲ್ಲಿ ಜಾನಪದ ನೃತ್ಯ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT