ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಇಲ್ಲದಿದ್ದರೆ ಎತ್ತಿನಹೊಳೆ ಯೋಜನೆ ನಿಲ್ಲಿಸಲಿ

ಅನಿಲ್‌ ಮಾಧವ್‌ ದವೆಗೆ ಸಚಿವ ಬಿ.ರಮಾನಾಥ ರೈ ಸವಾಲು
Last Updated 31 ಡಿಸೆಂಬರ್ 2016, 19:44 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಒಪ್ಪಿಗೆ ಇಲ್ಲದೇ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದರೆ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಲಿ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಸವಾಲು ಹಾಕಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಕಾಮಗಾರಿಗಾಗಿ ಮರಗಳನ್ನು ಕಡಿಯಲು ಅನುಮತಿ ನೀಡಿಲ್ಲ ಎಂಬ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವ ಅನಿಲ್‌ ಮಾಧವ್‌ ದವೆ ಅವರ ಹೇಳಿಕೆಯನ್ನು ಅಲ್ಲಗಳೆದರು. ‘ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅನುಮತಿಯನ್ನು ಪಡೆದ ಬಳಿಕವೇ ರಾಜ್ಯ ಸರ್ಕಾರ ಕಾಮಗಾರಿ ಆರಂಭಿಸಿದೆ. ಕೇಂದ್ರ ಸಚಿವರ ಹೇಳಿಕೆ ಬಗ್ಗೆ ನನಗೇನೂ ತಿಳಿದಿಲ್ಲ’ ಎಂದರು.

ಬೃಹತ್‌ ಯೋಜನೆಗಳ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ಆರಂಭಿಸಲು ಸಾಧ್ಯವಿಲ್ಲ. ಅದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ಜ್ಞಾನ. ಎತ್ತಿನಹೊಳೆ ಯೋಜನೆ ಕುಡಿಯುವ ನೀರು ಪೂರೈಕೆ ಯೋಜನೆ ಎಂಬ ಕಾರಣಕ್ಕಾಗಿ ಅನುಮತಿ ಲಭಿಸಿದೆ. 13.79 ಹೆಕ್ಟೇರ್‌ ಅರಣ್ಯ ಜಮೀನನ್ನು ಯೋಜನೆಗಾಗಿ ಬಳಸಿಕೊಳ್ಳಲು 2016ರ ಸೆಪ್ಟೆಂಬರ್‌ 15ರಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಅದಕ್ಕೆ ಸಂಬಂಧಿಸಿದ ಪತ್ರವನ್ನು ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT