ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ, ಭಾಷೆ, ಧರ್ಮದ ಹೆಸರಲ್ಲಿ ಮತ ಯಾಚನೆ ಕಾನೂನು ಬಾಹಿರ

Last Updated 2 ಜನವರಿ 2017, 6:56 IST
ಅಕ್ಷರ ಗಾತ್ರ

ನವದೆಹಲಿ: ಜಾತಿ, ಭಾಷೆ, ಧರ್ಮ ಹಾಗೂ ಸಮುದಾಯಗಳ ಹೆಸರಲ್ಲಿ ಮತ ಯಾಚಿಸುವುದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್‌ ಸೋಮವಾರ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಅವರ ನೇತೃತ್ವದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 20 ವರ್ಷಗಳಷ್ಟು ಹಳೆಯ ‘ಹಿಂದುತ್ವ ಪ್ರಕರಣ’ದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

ಜಾತಿ, ಭಾಷೆ, ಧರ್ಮ ಹಾಗೂ ಸಮುದಾಯಗಳ ಆಧಾರದಲ್ಲಿ ಮತ ಯಾಚಿಸುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ತಪ್ಪು. ಈ ರೀತಿ ಮತ ಯಾಚಿಸುವ ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು ಎಂದು ತೀರ್ಪು ನೀಡಲಾಗಿದೆ.

ಚುನಾವಣಾ ಪ್ರಕ್ರಿಯೆ ಜಾತ್ಯತೀತವಾಗಿ ನಡೆಯಬೇಕು. ಧರ್ಮವನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಸುಪ್ರೀಂಕೋರ್ಟ್‌ನ ಈ ತೀರ್ಪು ಮುಂಬರುವ ಪಂಚರಾಜ್ಯಗಳ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT