ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ನ್ಯಾಯಮೂರ್ತಿಯಾಗಿ ಖೇಹರ್‌ ಅಧಿಕಾರ ಸ್ವೀಕಾರ

Last Updated 4 ಜನವರಿ 2017, 19:30 IST
ಅಕ್ಷರ ಗಾತ್ರ
ನವದೆಹಲಿ: ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಗದೀಶ್‌ ಸಿಂಗ್‌ ಖೇಹರ್‌ ಅವರು ಭಾರತದ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.
 
ರಾಷ್ಟ್ರಪತಿ ಭವನದ ದರ್ಬಾರ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣವ್‌ ಮುಖರ್ಜಿ ಅವರು ಖೇಹರ್‌ ಅವರಿಗೆ ಅಧಿಕಾರದ ಪ್ರಮಾಣ ವಚನ ಬೋಧಿಸಿದರು. 
 
64 ವರ್ಷದ ಖೇಹರ್‌ ಅವರು ದೇಶದ ನ್ಯಾಯಾಂಗ ವ್ಯವಸ್ಥೆಯ ಸರ್ವೋಚ್ಚ ಹುದ್ದೆಯನ್ನು ಅಲಂಕರಿಸಿದ ಸಿಖ್‌ ಸಮುದಾಯದ ಮೊದಲ ವ್ಯಕ್ತಿ.
 
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಖೇಹರ್‌ ಅವರು ಆಗಸ್ಟ್‌ 27 ರವರೆಗೆ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT