ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಅಂಬಿಗರ ಚೌಡಯ್ಯ, ಸಿದ್ಧರಾಮೇಶ್ವರ ಜಯಂತ್ಯುತ್ಸವ; ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ
Last Updated 5 ಜನವರಿ 2017, 10:17 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ 14ರಂದು ಸಿದ್ಧರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

14ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕರಡಿ ಮಜಲು, ಪೂಜಾ ಕುಣಿತ, ಕುದುರೆ ಕುಣಿತ ಸೇರಿದಂತೆ ಇತರ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು. ಇದರ ಜತೆಗೆ ಶಾಲಾ ಮಕ್ಕಳಿಂದ ಸಿದ್ಧರಾಮೇಶ್ವರ ಹಾಗೂ 12ನೇ ಶತಮಾನದ ಶರಣರ ವೇಷಭೂಷಣಗಳೊಂದಿಗೆ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಎಲ್ಲ ಶಾಲೆಗಳಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಿಸಬೇಕು. ಶಾಲಾ–-ಕಾಲೇಜು ಮಕ್ಕಳಿಗೆ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಬೆಳಿಗ್ಗೆ 11 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಮುಖ್ಯ ಸಮಾರಂಭಕ್ಕೆ ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು. ಈ ಸಂದರ್ಭದಲ್ಲಿ ವಚನಗಾಯನ, ನುರಿತ ಉಪನ್ಯಾಸಕರನ್ನು ಆಹ್ವಾನಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಬಿಗರ ಚೌಡಯ್ಯ ಜಯಂತಿ ಆಚರಣೆ: ಜಿಲ್ಲಾಡಳಿತದ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿಯನ್ನು ಇದೇ 21ರಂದು ಅರ್ಥಪೂರ್ಣವಾಗಿ ಅಚರಿಸಲು ನಿರ್ಧರಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.

21ರ ಶನಿವಾರ ಬೆಳಿಗ್ಗೆ 10ಗಂಟೆಗೆ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ, ಶರಣರ ವೇಷಭೂಷಣದೊಂದಿಗೆ ವಿದ್ಯಾರ್ಥಿಗಳಿಂದ ಸ್ತಬ್ಧಚಿತ್ರಗಳ ಪ್ರದರ್ಶನ, ನುರಿತ ಉಪನ್ಯಾಸಕರನ್ನು ಆಹ್ವಾನಿಸಿ ಅಂಬಿಗರ ಚೌಡಯ್ಯನವರ ತತ್ವ ಆದರ್ಶಗಳ ಕುರಿತು ಉಪನ್ಯಾಸ ಏರ್ಪಡಿಸಲು ನಿರ್ಧರಿಸಲಾಯಿತು.

ಉಪ ವಿಭಾಗಾಧಿಕಾರಿ ಪರಶುರಾಮ ಮಾದರ, ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ್ಲ, ಅಭಿಷೇಕ ಚಕ್ರವರ್ತಿ, ರಾಮು ಹೊಸಪೇಟಿ, ಭರತ ಕೋಳಿ, ಭೀಮರಾಯ ಜಿಗಜಿಣಗಿ, ಶರಣು ಸಬರದ, ಶಿವಾನಂದ ಭುಯ್ಯಾರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT