ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎತ್ತಿನಹೊಳೆ ಅನುಮಾನ ಬಗೆಹರಿಸಿ’

Last Updated 6 ಜನವರಿ 2017, 19:30 IST
ಅಕ್ಷರ ಗಾತ್ರ
ಬೆಂಗಳೂರು: ಎತ್ತಿನ ಹೊಳೆ ಯೋಜನೆಯಲ್ಲಿ 24 ಟಿಎಂಸಿ ಅಡಿ ನೀರು ಲಭ್ಯತೆ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಹೇಳಿದರು.
 
ಕರ್ನಾಟಕ ನೀರಾವರಿ ನಿಗಮ ಕೈಗೆತ್ತಿಕೊಂಡಿರುವ ವಿವಿಧ ಯೋಜನೆ ಗಳ ಪ್ರಗತಿ ಪರಿಶೀಲನೆ ಶುಕ್ರವಾರ ನಡೆಸಿದ ಸಚಿವರು, ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಎಲ್ಲ ಗೊಂದಲಗಳಿಗೆ ಸಮರ್ಪಕ ಉತ್ತರ ನೀಡಬೇಕು ಎಂದು ಸಲಹೆ ನೀಡಿದರು.
 
ಎತ್ತಿನ ಹೊಳೆ ಯೋಜನೆಯಲ್ಲಿ ಹೊಂಗಡ ಹಳ್ಳ, ಎತ್ತಿನ ಹೊಳೆ, ಕಾಡು ಮನೆ ಹೊಳೆ, ಕೇರಿಹೊಳೆಗಳಿಗೆ ಒಟ್ಟು ಎಂಟು ಜಾಗಗಳಲ್ಲಿ ನೀರು ಸಂಗ್ರ ಹಾಗಾರಗಳನ್ನು ನಿರ್ಮಿಸಲಾಗುತ್ತಿದೆ. ಈ ಪೈಕಿ ಆರು ಸಂಗ್ರಹಾಗಾರಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
 
ಕೋಲಾರ, ಚಿಕ್ಕಬಳ್ಳಾಪುರ, ರಾಮ ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ 64 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಈ ಯೋಜನೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದು. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT