ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆಗೆ ಕಾಂಗ್ರೆಸ್ ತಾಲೀಮು

Last Updated 7 ಜನವರಿ 2017, 19:30 IST
ಅಕ್ಷರ ಗಾತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಬಿಜೆಪಿಯನ್ನು ಹಿಮ್ಮೆಟ್ಟಿಸುವ ಗುರಿಯೊಂದಿಗೆ ಕಾಂಗ್ರೆಸ್ ಪಕ್ಷವು, ವಿಧಾನಸಭಾ ಚುನಾವಣೆಗೆ ಬೇಗನೆ ಸಿದ್ಧತೆ ಆರಂಭಿಸುವ ಹುಮ್ಮಸ್ಸಿನಲ್ಲಿದೆ.
 
ಈ ವರ್ಷದ ಅಂತ್ಯದಲ್ಲಿ ಗುಜರಾತ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಲ್ಲಿ ಕಾಂಗ್ರೆಸ್ ಎರಡು ದಶಕಗಳಿಂದ ಅಧಿಕಾರ ಕಂಡಿಲ್ಲ. ಈ ತಿಂಗಳ ಅಂತ್ಯಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಉದ್ದೇಶ ಕಾಂಗ್ರೆಸ್ ಪಕ್ಷದ್ದು.
 
‘ಗುಜರಾತಿನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿಯುವ ಆಕಾಂಕ್ಷೆ ವ್ಯಕ್ತಪಡಿಸಿ ಈಗಾಗಲೇ 1,570 ಜನ ಅರ್ಜಿ ಸಲ್ಲಿಸಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಗುಜರಾತ್ ಉಸ್ತುವಾರಿ ಗುರುದಾಸ್ ಕಾಮತ್ ‘ಪ್ರಜಾವಾಣಿ’ಗೆ ತಿಳಿಸಿದರು. ಹೊಸ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಮಿತಿಯೊಂದನ್ನು ರಚಿಸುವ ಚಿಂತನೆ ಕಾಂಗ್ರೆಸ್‌ನಲ್ಲಿ ನಡೆದಿದೆ.
 
ತನ್ನ ಸಾಂಪ್ರದಾಯಿಕ ಮತದಾರರ ಬೆಂಬಲ ಮಾತ್ರವಲ್ಲದೆ, ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ನಡೆದ ಪಟೇಲ್ ಮೀಸಲಾತಿ ಚಳವಳಿ ಹಾಗೂ ಊನಾದಲ್ಲಿ ದಲಿತರ ಮೇಲೆ ನಡೆದ ಹಲ್ಲೆಯ ನಂತರದ ಬೆಳವಣಿಗೆಗಳಿಂದಾಗಿ ತನಗೆ ರಾಜಕೀಯ ಲಾಭ ಸಿಗುತ್ತದೆ ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದ್ದು.
 
2014ರ ಲೋಕಸಭಾ ಚುನಾವಣೆ ವೇಳೆ ಸಾಕಷ್ಟು ಚರ್ಚೆಗೆ ಒಳಗಾದ ‘ಗುಜರಾತ್ ಮಾದರಿ ಅಭಿವೃದ್ಧಿ’ಯ ‘ಟೊಳ್ಳನ್ನು ಬಯಲುಮಾಡಲು’ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT