ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆಗೆ ಸೂಚನೆ

Last Updated 9 ಜನವರಿ 2017, 9:04 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದಡಿ ಜ. 26ರಂದು ನಗರದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಕೈಗೊಳ್ಳ ಬೇಕು’ ಎಂದು ಜಿಲ್ಲಾಧಿಕಾರಿ ಬಿ. ರಾಮು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 
ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದೆ. ಅತ್ಯಂತ ಶ್ರದ್ಧೆಯಿಂದ ಆಚರಣೆ ಮಾಡಬೇಕಿದೆ. ಕಳೆದ ಬಾರಿ ಕಾರ್ಯಕ್ರಮ ಆಯೋಜನೆಗೆ ನೇಮಕ ವಾದ ಅಧಿಕಾರಿಗಳು ಈ ಬಾರಿಯೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸ ಬೇಕು. ಯಾವುದೇ ಲೋಪಕ್ಕೆ ಅವಕಾಶ ವಾಗದಂತೆ ಕೆಲಸ ಪೂರ್ಣಗೊಳಿಸಬೇಕು ಎಂದರು.

ಧ್ವಜಾರೋಹಣ ನಂತರ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ಏರ್ಪಡಿಸಬೇಕು. ಆಚರಣೆಯ ಮಹತ್ವ, ದೇಶಭಕ್ತಿ ಬಿಂಬಿಸುವ ಕಾರ್ಯ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಸಜ್ಜು ಗೊಳಿಸಬೇಕು ಎಂದು ತಿಳಿಸಿದರು.

ಗುಣಮಟ್ಟದ ಕಾರ್ಯಕ್ರಮಕ್ಕೆ ಒತ್ತು ನೀಡಬೇಕು. ವಿದ್ಯಾರ್ಥಿಗಳಿಗೆ ತಾಲೀಮು ನಡೆಸಲು ಶಿಕ್ಷಣ ಇಲಾಖೆಯ ಅಧಿಕಾರಿ ಗಳು ಕ್ರಮವಹಿಸಬೇಕು. ಪ್ರತಿ ಹಂತ ದಲ್ಲೂ ಮಾರ್ಗದರ್ಶನ ನೀಡಬೇಕು. ಅಚ್ಚುಕಟ್ಟಾಗಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಗಳನ್ನು ಅಣಿಗೊಳಿಸಬೇಕು ಎಂದರು.

ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸಬೇಕು. ಕಾರ್ಯಕ್ರಮಕ್ಕೆ ಯಾವ ರೀತಿ ಸಿದ್ಧತೆ ನಡೆದಿದೆ ಎಂಬ ಬಗ್ಗೆ ಜ. 20ರೊಳಗೆ ಅಧಿಕಾರಿಗಳು ಸಭೆ ನಡೆಸಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಶಾ. ಮುರಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಡಿವೈಎಸ್‌ಪಿ ಗಂಗಾಧರಸ್ವಾಮಿ, ಆಹಾರ ಇಲಾಖೆಯ ಉಪ ನಿರ್ದೇಶಕ ಆರ್. ರಾಚಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಗ್ರಾಮೀಣ ಪ್ರತಿನಿಧಿಗಳಿಗೆ ಸನ್ಮಾನ
ಚಾಮರಾಜನಗರ: ‘ಉಷಾ’ ಆಂದೋಲನದಡಿ ಜಿಲ್ಲೆಯಲ್ಲಿ ನೈರ್ಮಲ್ಯ ಸೇರಿದಂತೆ ಮಹಿಳೆಯರು ಹಾಗೂ ಮಕ್ಕಳ ಬೆಳವಣಿಗೆಗೆ ಸಂಬಂಧಿಸಿದಂತೆ ಹಲವು ಕಾರ್ಯಗಳು ಯಶಸ್ವಿಯಾಗಿ ನಡೆದಿವೆ. ಈ ಕಾರ್ಯದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವ ವಿದ್ಯಾರ್ಥಿಗಳು, ಗ್ರಾಮೀಣ ಭಾಗದ ಪ್ರತಿನಿಧಿಗಳನ್ನು ಗಣರಾಜ್ಯೋತ್ಸವ ದಲ್ಲಿ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ಯುವಜನ ಮೇಳ
ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2016-17ನೇ ಸಾಲಿನ ಗುಂಡ್ಲುಪೇಟೆ ತಾಲ್ಲೂಕು ಮಟ್ಟದ ಯುವಜನ ಮೇಳವು ಜ.17 ರಂದು ಗುಂಡ್ಲುಪೇಟೆ ಪಟ್ಟಣದ ನಿರ್ಮಲ ಸೇವಾ ಕೇಂದ್ರದಲ್ಲಿ ನಡೆಯಲಿದೆ.


ವೈಯಕ್ತಿಕ ವಿಭಾಗದಲ್ಲಿ ಏಕಪಾತ್ರಾಭಿನಯ, ಭಾವಗೀತೆ, ಲಾವಣಿ, ರಂಗಗೀತೆ ಹಾಗೂ ಗುಂಪು ವಿಭಾಗದಲ್ಲಿ ಗೀಗಿಪದ, ಕೋಲಾಟ, ಜನಪದ ನೃತ್ಯ, ಸೋಬಾನೆ ಪದ, ಭಜನೆ, ಜನಪದ ಗೀತೆ, ಚರ್ಮವಾದ್ಯ ಮೇಳ ಸ್ಪರ್ಧೆಗಳಿವೆ.

ಯುವಕ, ಯುವತಿಯರು, ಶಾಲಾ– ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧಿಗಳು 15ರಿಂದ 35 ವರ್ಷ ವಯೋ ಮಿತಿಯೊಳಗೆ ಇರಬೇಕು. ಯಾವುದೇ ಪ್ರಯಾಣ ಭತ್ಯೆ ನೀಡುವುದಿಲ್ಲ. ಮಧ್ಯಾಹ್ನದ ಲಘು ಉಪಹಾರ ನೀಡಲಾಗು ತ್ತದೆ. ಆಸಕ್ತರು ಜ.17 ರಂದು ಬೆಳಿಗ್ಗೆ 9.30 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳಬೇಕು.

ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇ ಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224932, ಮೊಬೈಲ್ 94827 18278 ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT