ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧೇಶ್ವರ ಜಾತ್ರೆ: ಸೌಕರ್ಯ ಕಲ್ಪಿಸಲು ಸೂಚನೆ

ಸಿದ್ಧೇಶ್ವರ ಜಾನುವಾರು ಜಾತ್ರೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ
Last Updated 9 ಜನವರಿ 2017, 9:24 IST
ಅಕ್ಷರ ಗಾತ್ರ
ವಿಜಯಪುರ: ಇದೇ 10ರಿಂದ 18ರವರೆಗೆ ತೊರವಿ ಗ್ರಾಮದಲ್ಲಿ ನಡೆಯಲಿರುವ ಸಿದ್ಧೇಶ್ವರ ಜಾನುವಾರು ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸಂಸದೀಯ ಕಾರ್ಯದರ್ಶಿ, ನಗರ ಶಾಸಕ ಡಾ.ಮಕ್ಬೂಲ್ ಬಾಗವಾನ ಸೂಚನೆ ನೀಡಿದರು.
 
ಸಿದ್ಧೇಶ್ವರ ಜಾನುವಾರು ಜಾತ್ರೆ ಅಂಗವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ  ಕರೆದಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ, ರೈತರ ಆರೋಗ್ಯಕ್ಕೆ ಮತ್ತು ಭಕ್ತಾದಿಗಳ ಅನುಕೂಲಕ್ಕೆ ಸೂಕ್ತ ಆರೋಗ್ಯ ಸೇವೆಯನ್ನು ಆರೋಗ್ಯ ಇಲಾಖೆ ಮೂಲಕ ಒದಗಿಸಬೇಕು ಎಂದು ಹೇಳಿದರು.
 
ಜಾತ್ರೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಸುರಕ್ಷತಾ ಕ್ರಮಗಳು, ಮಹಾ ನಗರ ಪಾಲಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ, ಕೆಎಸ್ಆರ್‌ಟಿಸಿ ಮೂಲಕ ತೊರವಿ ಜಾತ್ರೆ ಸ್ಥಳಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ, ಅಗ್ನಿಶಾಮಕ ಇಲಾಖೆಯಿಂದ ಸೂಕ್ತ ಸುರಕ್ಷತಾ ವ್ಯವಸ್ಥೆ, ವಿದ್ಯುತ್ ಇಲಾಖೆಯಿಂದ ವಿದ್ಯುತ್ ವ್ಯವಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಮೂಲಕ ವಸ್ತು ಪ್ರದರ್ಶನ ಮಳಿಗೆ ಸ್ಥಾಪನೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
 
ಇದರ ಜತೆಗೆ ವಿವಿಧ ಸ್ಪರ್ಧಾಳುಗಳಿಗೆ ನೀಡಲಾಗುವ ಬಹುಮಾನ ವಿತರಣೆ ಸೇರಿದಂತೆ, ಇನ್ನಿತರ ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ಸೂಚಿಸಿ, ಒಟ್ಟಾರೆ ಜಾತ್ರೆ ಸೌಹಾರ್ದಯುತವಾಗಿ ನಡೆಯುವಂತೆ ನೋಡಿಕೊಳ್ಳಲು ಸಲಹೆ ನೀಡಿದರು.
 
ಎಪಿಎಂಸಿ ಕಾರ್ಯದರ್ಶಿ ರಮೇಶ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
 
***
ಜಾನುವಾರು ಆರೋಗ್ಯ ತಪಾಸಣೆಗೆ  ಪಶು ವೈದ್ಯರು ಸನ್ನದ್ಧವಾಗಿರಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸೂಕ್ತ ಔಷಧಿ ಸಂಗ್ರಹಿಸಿಟ್ಟುಕೊಳ್ಳಬೇಕು
-ಡಾ.ಮಕ್ಬೂಲ್ ಬಾಗವಾನ,
ಶಾಸಕ

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT