ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಕರ್ನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ’

ಕದ್ರಿ ಉದ್ಯಾನದಲ್ಲಿ ₹ 5 ಕೋಟಿ ವೆಚ್ಚದಲ್ಲಿ ಸಂಗೀತ ಕಾರಂಜಿ
Last Updated 9 ಜನವರಿ 2017, 9:32 IST
ಅಕ್ಷರ ಗಾತ್ರ
ಮಂಗಳೂರು: ಬಿಕರ್ನಕಟ್ಟೆಯಲ್ಲಿ ಸುಸ ಜ್ಜಿತ ಮಾರುಕಟ್ಟೆ ನಿರ್ಮಿಸಲು ಉದ್ದೇಶಿ ಸಲಾಗಿದ್ದು, ಈಗ ಇರುವ ಮಾರುಕಟ್ಟೆ ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿ ಮಾರುಕಟ್ಟೆ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
 
ಬಿಕರ್ನಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡಿ ಮಾತನಾಡಿದ ಅವರು, ಈಗ ಇರುವ ವಾರದ ಸಂತೆಯನ್ನು ಕೂಡ ಸ್ಥಳಾಂತರಗೊಳಿಸಲಾಗುವುದು ಎಂದ ರು. ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ವಾದಲ್ಲಿ ಕೋಳಿ ಮಾರಾಟ, ಮಾಂಸ ಮತ್ತು ಮೀನು ಮಾರಾಟಕ್ಕೆ ಪ್ರತ್ಯೇಕ ಅಂಗಡಿಗಳನ್ನು ಕಟ್ಟಿಕೊಡಲಾಗುವುದು. ವಾರದ ಸಂತೆಗೂ ಸೂಕ್ತ ವ್ಯವಸ್ಥೆ ಮಾಡ ಲಾಗುವುದು ಎಂದ ಅವರು, ಇದಕ್ಕೆ ಅಂಗಡಿ ಮಾಲೀಕರು ಸಹಕರಿಸುವಂತೆ ಮನವಿ ಮಾಡಿದರು.
 
ಮಾಜಿ ಮೇಯರ್ ಅಬ್ದುಲ್ ಅಜೀಜ್, ಕೆಎಸ್ಆರ್‌ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ಡೆನ್ಸಿಲ್, ನೆಲ್ಸನ್, ಸ್ಟ್ಯಾನಿ ಅರ್ಲಾರಿಸ್, ಅಲ್ವಿನ್ ಪಾಯಸ್, ಪಾಲಿಕೆ ಎಂಜಿನಿಯರ್‌ಗಳು ಇದ್ದರು. 
 
ಕದ್ರಿಯಲ್ಲಿ ಸಂಗೀತ ಕಾರಂಜಿ: ಕದ್ರಿ ಉದ್ಯಾನದಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಾಣ ಮಾಡಲಾಗುತ್ತಿದ್ದು, ಇನ್ನೂ ಹೆಚ್ಚುವರಿಯಾಗಿ ₹50 ಲಕ್ಷ ವಿನಿಯೋಗಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
 
ಕದ್ರಿಯಲ್ಲಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಜನವರಿಯಲ್ಲಿ ಸಂಗೀತ ಕಾರಂಜಿ ಉದ್ಘಾಟನೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕೆಲಸವನ್ನು ಭರದಿಂದ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
 
ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಆಯುಕ್ತ ಶ್ರೀಕಾಂತ, ಪಾಲಿಕೆ ಸದಸ್ಯ ರಾಧಾಕೃಷ್ಣ, ಅರುಣ್ ಕುವೆಲ್ಲೋ, ಕೆಎಸ್ಆರ್‌ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ಗುತ್ತಿಗೆದಾರ ಪ್ರಭಾಕರ್ ಯೆಯ್ಯಾಡಿ, ಮೋಹನ್ ಶೆಟ್ಟಿ, ನೆಲ್ಸನ್ ಮುಂತಾದವರಿದ್ದರು.
 
**
ಈ ಸಂಗೀತ ಕಾರಂಜಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಒದಗಿಸಬೇಕು. ಇದು ಮೈಸೂರಲ್ಲಿ ಇರುವ ಸಂಗೀತ ಕಾರಂಜಿಗಿಂತಲೂ ಚೆನ್ನಾಗಿ ಕಾಣಬೇಕು.
-ಜೆ.ಆರ್. ಲೋಬೊ
ಶಾಸಕ 

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT