ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಬ್ಕೊ ಸಂಸ್ಥೆಗೆ ₹ 250 ಕೋಟಿ ಅನುದಾನ

Last Updated 11 ಜನವರಿ 2017, 5:59 IST
ಅಕ್ಷರ ಗಾತ್ರ

ಬೀದರ್‌: ಕೇಂದ್ರ ಸರ್ಕಾರವು ಅಂಗವಿಕಲರಿಗೆ ಅಗತ್ಯವಿರುವ ಕೃತಕ ಕಾಲು ಹಾಗೂ ಕೈಗಳನ್ನು ಹೊಸ ತಂತ್ರಜ್ಞಾನದ ಮೂಲಕ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಲಿಂಬ್ಕೊ ಸಂಸ್ಥೆಗೆ  ₹ 250 ಕೋಟಿ ಅನುದಾನ ಒದಗಿಸಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ  ಸಚಿವಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಜಿಲ್ಲಾ ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ  ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾನಪುರ ಹಾಗೂ ಭೂಪಾಲದಲ್ಲಿರುವ ಕೃತಕ ಕೈ,ಕಾಲು ತಯಾರಿಕೆ ಘಟಕಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ  ಸಾಧನಗಳನ್ನು  ಅಭಿವೃದ್ಧಿ ಪಡಿಸಿ ಅಂಗವಿಕಲರಿಗೆ ವಿತರಿಸಲು ಈ ನೆರವು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಮೊದಲು ಏಳು ಬಗೆಯ ಅಂಗ ವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮಾತ್ರ ಅಂಗವಿಕಲರ ಪ್ರಮಾಣಪತ್ರ ವಿತರಿಸ ಲಾಗುತ್ತಿತ್ತು. ಈಗ 21 ಬಗೆಯ ದೈಹಿಕ ನೂನ್ಯತೆ ಇರುವವರಿಗೆ ಪ್ರಮಾಣಪತ್ರ ಕೊಡಲು ಕ್ರಮಕೈಗೊಳ್ಳಲಾಗಿದೆ. ಒಂದು ವರ್ಷದ ಹಿಂದೆ ಜಿಲ್ಲಾ ಮಟ್ಟದಲ್ಲಿ ನಡೆಸಲಾದ ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ವೈದ್ಯರು ಶಿಫಾರಸು ಮಾಡಿದ ಅಂಗವಿಕ ಲರಿಗೆ ಸಾಧನ ಸಲಕರಣೆ ವಿತರಿಸಲಾಗಿದೆ ಎಂದು ಹೇಳಿದರು.

ಇನ್ನುಳಿದವರಿಗೂ ಸಾಧನ ಸಲಕರಣೆ ವಿತರಿಸಲು ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿ ಸಲಾಗುವುದು ಎಂದು ತಿಳಿಸಿದರು.

ಪುಣ್ಯದ ಕೆಲಸ: ಅಂಗವಿಕಲರ ಸೇವೆ ಮಾಡುವುದು ಪುಣ್ಯದ ಕೆಲಸ. ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು ಮತ್ತೊಮ್ಮೆ  ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಉಳಿದ ವರಿಗೂ ಸರ್ಕಾರದ ಸೌಲಭ್ಯ ದೊರೆಯು ವಂತೆ ಮಾಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಹೇಳಿದರು.

ಜಿಲ್ಲೆಯಿಂದ 2,290 ಅರ್ಜಿಗಳು ಬಂದರೂ 623 ಅಂಗವಿಕಲರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿದೆ. ಇನ್ನುಳಿದವರಿಗೂ ಹಂತ ಹಂತವಾಗಿ ಸಾಧನ ಸಲಕರಣೆಗಳು ದೊರೆಯಲಿವೆ ಎಂದು ತಿಳಿಸಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ರಘುನಾಥ ರಾವ್‌ ಮಲ್ಕಾಪುರೆ,  ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆರ್‌. ಸೆಲ್ವಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಇಟಂಕಪಳ್ಳಿ, ಜಿಲ್ಲಾ ಅಂಗವಿ ಕಲರ ಕಲ್ಯಾಣ ಅಧಿಕಾರಿ ಮಾಣಿಕರಾವ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT