ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ಸದುಪಯೋಗಕ್ಕೆ ಸಚಿವ ಸಲಹೆ

Last Updated 11 ಜನವರಿ 2017, 10:25 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ನಗರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್‌ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಶೇ 24.10 ನಿಧಿಯಡಿ 76 ವಿದ್ಯಾರ್ಥಿಗಳಿಗೆ ₹ 4.80 ಲಕ್ಷ ವಿದ್ಯಾರ್ಥಿ ವೇತನ, ಇಬ್ಬರಿಗೆ  ಪಕ್ಕಾ ಮನೆ ನಿರ್ಮಾಣಕ್ಕೆ ₹2 ಲಕ್ಷ, 10 ಮಂದಿಗೆ ಮನೆ ದುರಸ್ತಿಗೆ ₹2 ಲಕ್ಷ, 17 ಮಂದಿಗೆ ಅಡುಗೆ ಅನಿಲ ಸಂಪರ್ಕಕ್ಕೆ ಸಹಾಯಧನ ₹60 ಸಾವಿರ, ಶೌಚಾಲಯ ನಿರ್ಮಾಣಕ್ಕಾಗಿ ₹2.66 ಲಕ್ಷ ಹಾಗೂ ಆರೋಗ್ಯ ವಿಮೆಗಾಗಿ ₹5ಲಕ್ಷ ಮೊತ್ತದ ಸವಲತ್ತುಗಳನ್ನು ವಿತರಿಸಿದರು.

ಬಡ ಜನರ ಕಲ್ಯಾಣ ಕಾರ್ಯಕ್ರಮ ಗಳಿಗಾಗಿ ಮೀಸಲಾದ ಶೇ 7.25 ನಿಧಿಯಡಿ 70 ವಿದ್ಯಾರ್ಥಿಗಳಿಗೆ ₹4.9 ಲಕ್ಷ ವಿದ್ಯಾರ್ಥಿವೇತನ, 7 ಮಂದಿಗೆ ಮನೆ ದುರಸ್ತಿಗೆ ₹1.40 ಲಕ್ಷ, 20 ಮಂದಿಗೆ ಅಡುಗೆ ಅನಿಲ ಸಂಪರ್ಕಕ್ಕೆ ಸಹಾಯಧನ ₹84 ಸಾವಿರ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ₹3.20  ಲಕ್ಷ ಮೊತ್ತದ ಸವಲತ್ತು ನೀಡಿದರು.
ಹಾಗೆಯೇ ಅಂಬೇಡ್ಕರ್‌ ನಿವಾಸ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ 68 ಮಂದಿಗೆ ಮನೆ ನಿರ್ಮಾ ಣಕ್ಕಾಗಿ ₹2.24 ಕೋಟಿ ಮೊತ್ತದ ಚೆಕ್‌ಗಳನ್ನು ಸಚಿವರು ವಿತರಿಸಿದರು.

ನಂತರ ಮಾತನಾಡಿದ ಸಚಿವರು, ದೇಶದಲ್ಲಿ ಬಡತನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಇತರೆ ಸಮುದಾಯದ ಅಭಿವೃದ್ಧಿಗಾಗಿ ಕಡ್ಡಾಯ ವಾಗಿ ಮೀಸಲಿಟ್ಟಿರುವ ನಿಧಿಯಿಂದ ಈ ಸೌಲಭ್ಯಗಳನ್ನು ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ತಮಗೆ ನೀಡಿರುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಹಾಗೂ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು. ಪೌರಾಯುಕ್ತ ಮಂಜುನಾಥಯ್ಯ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT