ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ರಾಂತಿ ಹಬ್ಬ: 650 ವಿಶೇಷ ಬಸ್‌ ಸೌಲಭ್ಯ

Last Updated 11 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 650 ವಿಶೇಷ ಬಸ್‌ಗಳ ಸಂಚಾರ ಆರಂಭಿಸಲಿದೆ.

ಇದೇ 13, 14 ಮತ್ತು 15ರಂದು  ವಿಶೇಷ ಬಸ್‌ಗಳು ಸಂಚರಿಸಲಿವೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಾಸನ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ  ಹಾಗೂ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಿಗೆ  ಬಸ್‌ಗಳು ಹೊರಡಲಿವೆ.

ಮೈಸೂರು, ಮಡಿಕೇರಿ ಭಾಗಕ್ಕೆ ತೆರಳುವ ಬಸ್‌ಗಳು ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಹಾಗೂ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕಡೆಗೆ ಹೋಗುವ ಬಸ್‌ಗಳು ಶಾಂತಿನಗರದ ಟಿಟಿಎಂಸಿ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ವಿಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್‌ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಕ್ರಾಸ್‌, ಕೆಂಗೇರಿ ಉಪನಗರದಿಂದಲೂ ಬಸ್‌ಗಳು ಚಲಿಸಲಿವೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT