ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಯಲ್ಲೇ ಶಿಕ್ಷಣ ಕೊಡಿಸಲು ಸಲಹೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜೇಶ್‌
Last Updated 12 ಜನವರಿ 2017, 10:27 IST
ಅಕ್ಷರ ಗಾತ್ರ
ರಾಮನಗರ: ‘ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಕಲಿಸುವ ಜತೆಗೆ ಶಿಕ್ಷಕರು ವಿನಯವನ್ನು ಕಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ. ರಾಜೇಶ್‌ ಹೇಳಿದರು.
 
ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ತೆಗೆಯುವಂತೆ ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಪರೀಕ್ಷೆಗಳಲ್ಲಿ ಕಡಿಮೆ ಅಂಕ ಗಳಿಸಿದವರೂ ಇಂದು ಉನ್ನತ ಸ್ಥಾನಮಾನಗಳನ್ನು ಪಡೆದಿದ್ದಾರೆ’ ಎಂದರು. 
 
‘ಸರ್ಕಾರಿ ಶಾಲೆಗಳು, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳು ಸಹ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಲಿಪಶುವಾಗದೆ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣವನ್ನು ಕೊಡಿಸಬೇಕು’ ಎಂದು ತಿಳಿಸಿದರು.
 
ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್‌ ಮಾತನಾಡಿ ‘ಶಿಕ್ಷಕರು ವಿದ್ಯಾರ್ಥಿಗಳು ನಿಗದಿತ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಉತ್ತಮ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಅಧ್ಯಯನವನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ತರಗತಿಗಳು ಪ್ರಾರಂಭವಾದ ದಿನದಿಂದಲೇ ಓದಿನಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಪರೀಕ್ಷೆಯ ಸಮಯದಲ್ಲಿ ಒತ್ತಡ ಕಡಿಮೆಯಾಗುತ್ತದೆ. ಜತೆಗೆ ಉತ್ತಮ ದರ್ಜೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಸಹ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮೂಡಿಸಬೇಕು’ ಎಂದು ತಿಳಿಸಿದರು.
 
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ. ಸತೀಶ್‌ ಮಾತನಾಡಿ ‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗಿ ಮನೋಬಲ ಕಳೆದುಕೊಳ್ಳುತ್ತಿದ್ದಾರೆ. ಶಿಕ್ಷಣದಲ್ಲಿ ಮಾನವೀಯ ಮತ್ತು ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿರುವುದರಿಂದ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಮೊಬೈಲ್ ಮತ್ತು ಮದ್ಯ, ಮಾದಕ ವಸ್ತುಗಳ ಸೇವನೆಯಲ್ಲಿ ಯುವ ಸಮುದಾಯ ಕಳೆದು ಹೋಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು. 
 
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರಾದ ಶ್ರುತಿ, ಮಹೇಶ್‌, ವಿಶ್ವನಾಥ್‌ ಇತರರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT