ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

ಟಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ
Last Updated 12 ಜನವರಿ 2017, 11:06 IST
ಅಕ್ಷರ ಗಾತ್ರ
ಚಿತ್ರದುರ್ಗ: ಇದೇ 15ರಂದು ನಗರದ 22 ಕೇಂದ್ರಗಳಲ್ಲಿ ಎರಡು ಹಂತಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, 7200 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.
 
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ‘ಟಿಇಟಿ’ ಪರೀಕ್ಷೆ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ’ ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.
 
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ತುಂಬಾ ಅಚ್ಚುಕಟ್ಟಾಗಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ನಡೆಸಬೇಕು. ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಇನ್ನಿತರೆ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ  ನೀಡಬಾರದು’ ಎಂದು ತಿಳಿಸಿದ ಅವರು ‘ಈ ಸಂಬಂಧ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 
 
‘15ರಂದು ಬೆಳಿಗ್ಗೆ 9.30ರಿಂದ 12 ಗಂಟೆಯವರೆಗೆ ಮೊದಲ ಅವಧಿಯ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ ಸಂಜೆ 4.30ರವರೆಗೆ ಎರಡನೇ ಅವಧಿಯ ಪರೀಕ್ಷೆ ನಡೆಯಲಿದೆ’ ಎಂದು ಪರೀಕ್ಷೆ ನಡೆಯುವ ವಿಧಾನವನ್ನು ಜಿಲ್ಲಾಧಿಕಾರಿ ಅವರು ವಿವರಿಸಿದರು.
 
‘ಮೊದಲ ಅವಧಿಯ ಪತ್ರಿಕೆಯಲ್ಲಿ ಉತ್ತೀರ್ಣರಾದವರು 1ರಿಂದ 5ನೇ ತರಗತಿಯ ಶಿಕ್ಷಕರ ನೇಮಕಕ್ಕೆ ಅರ್ಹತೆ ಹೊಂದುತ್ತಾರೆ. ಇದಕ್ಕೆ 4263 ಅಭ್ಯರ್ಥಿ ಗಳು ನೋಂದಾಯಿಸಿಕೊಂಡಿದ್ದಾರೆ.  ಎರಡನೇ ಪತ್ರಿಕೆಯಲ್ಲಿ ಉತ್ತೀರ್ಣ ರಾದವರು 6ರಿಂದ 8ನೇ ತರಗತಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಹೊಂದುವರು. ಇದಕ್ಕೆ 7036 ಅಭ್ಯರ್ಥಿಗಳು ಪರೀಕ್ಷೆಗಾಗಿ ಹೆಸರು ನೊಂದಾಯಿಸಿದ್ದಾರೆ’ ಎಂದು ವಿವರಿಸಿದರು.
 
‘ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ, ಆಸನದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆ  ಕೇಂದ್ರದ ಸುತ್ತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ’ ಎಂದು ತಿಳಿಸಿದರು.
 
‘ಪರೀಕ್ಷಾ ಕೇಂದ್ರಗಳಿಗೆ  ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಮೇಲ್ವಿಚಾರಕರಿಗೂ ಪರೀಕ್ಷಾ ನಿಯಮಗಳ ಬಗ್ಗೆ ತರಬೇತಿಯನ್ನು ನೀಡಲು ಹಾಗೂ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ಒದಗಿಸಿ ನಂತರ ಉತ್ತರ ಪತ್ರಿಕೆಗಳನ್ನು ನಿಯಮದ ಪ್ರಕಾರ ಸ್ವೀಕರಿಸಿ ಕಳುಹಿಸುವ ವ್ಯವಸ್ಥೆಯನ್ನು ಎಲ್ಲಾ ಕೇಂದ್ರಗಳ ಅಧೀಕ್ಷಕರು ಮಾಡಬೇಕು’ ಎಂದು ಸೂಚಿಸಿದರು. 
 
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣಸಿದ್ದಪ್ಪ, ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲಾ, ಕಾಲೇಜುಗಳ ಪ್ರಾಚಾರ್ಯರು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT