ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ರಂದು ರಾಜ್ಯಮಟ್ಟದ ಸಮ್ಮೇಳನ

ಪ್ರತಿಭಾ ಪುರಸ್ಕಾರ: ಸಚಿವರಿಗೆ ಸನ್ಮಾನ, ಮೀಸಲಾತಿಗೆ ಒತ್ತಾಯ
Last Updated 12 ಜನವರಿ 2017, 11:10 IST
ಅಕ್ಷರ ಗಾತ್ರ
ಚಿತ್ರದುರ್ಗ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಜ.15ರಂದು ನಗರದ ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ 8 ನೇ ರಾಜ್ಯ ಮಟ್ಟದ ಸಮ್ಮೇಳನ ಹಾಗೂ ಗುರುನಮನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ  ನಾಗರಾಜ ಸಂಗಮ್ ತಿಳಿಸಿದರು.
 
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮೇಳನದ ಸಾನ್ನಿಧ್ಯ ವಹಿಸುವರು.  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮೇಳನ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಪಾಲ್ಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಗೌರವಿಸಲಾ ಗುವುದು’ ಎಂದು ತಿಳಿಸಿದರು.
 
‘ ಪೌರಾಡಳಿತ ಸಚಿವ ಈಶ್ವರಖಂಡ್ರೆ, ಬೃಹತ್ ನೀರಾವರಿ ಸಚಿವ ಎಂ.ಬಿ.ಪಾಟೀಲ್, ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಶಾಸಕ ಬಿ.ವೈ.ರಾಘವೇಂದ್ರ, ಜಿ.ಎಚ್. ತಿಪ್ಪಾರೆಡ್ಡಿ, ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ರೇಣುಕಾಚಾರ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು.
 
‘15ರಂದು ಬೆಳಿಗ್ಗೆ 11ಕ್ಕೆ ನೀಲ ಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆಯೋಜಿಸಲಾಗಿದೆ. ಜಿ.ಪಂ. ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಉದ್ಘಾಟಿಸುವರು ಎಂದು ತಿಳಿಸಿದರು.
 
‘ವೀರಶೈವ ಸಮಾಜಕ್ಕೆ ಮೀಸಲಾತಿ ನೀಡಬೇಕು. ಶೈಕ್ಷಣಿಕ ಸೌಲಭ್ಯ ನೀಡಲು ಸ್ಪಂದಿಸಬೇಕು. ವೀರಶೈವ ಲಿಂಗಾಯತ ನೌಕರರ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ತರಬೇತಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಸಮ್ಮೇಳನದ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
 
ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಎಸ್.ಷಣ್ಮುಖಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಬಿ.ಗಂಗಾಧರ್ ಸುದ್ದಿ ಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT