ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಕಾಮಗಾರಿಗೆ ಸಚಿವ ಕಾಗೋಡು ತಿಮ್ಮಪ್ಪ ಸೂಚನೆ

Last Updated 16 ಜನವರಿ 2017, 4:33 IST
ಅಕ್ಷರ ಗಾತ್ರ

ಸಾಗರ: ‘ನಗರವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಹಂತಹಂತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಗರಸಭೆ ಆಡಳಿತಕ್ಕೆ ಅಗತ್ಯ ಸೂಚನೆ ನೀಡಲಾಗಿದೆ’ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಲ್ಲಿನ ಎಸ್.ಎನ್.ನಗರ ಬೀಡಿ ಕ್ವಾಟರ್ಸ್‌ನಲ್ಲಿ ಹಾಗೂ ಗೋಪಾಲಗೌಡ ನಗರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಕೊಳಚೆ ಪ್ರದೇಶದಲ್ಲಿ ಮೂಲಸೌಲಭ್ಯ ಒದಗಿಸುವ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಗೋಪಾಲಗೌಡ ನಗರದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಬೀಡಿ ಕ್ವಾಟರ್ಸ್‌ನಲ್ಲಿ ಸಿಮೆಂಟ್ ರಸ್ತೆಗೆ ₹ 20 ಲಕ್ಷ ಹಾಗೂ ಗೋಪಾಲಗೌಡ ನಗರದಲ್ಲಿ ಸಿಮೆಂಟ್ ರಸ್ತೆಗೆ ₹ 20 ಲಕ್ಷ ಹಣ ಬಿಡುಗಡೆಯಾಗಿದೆ. ಕೊಳಚೆ ಅಭಿವೃದ್ದಿ ಮಂಡಳಿ ಈ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಜತೆಗೆ ಕೊಳಚೆ ಪ್ರದೇಶಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಸುಮಾರು
₹ 4.50 ಕೋಟಿ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ಸಾಗರ ನಗರದ  ಕೊಳಚೆ ಪ್ರದೇಶಗಳಿಗೆ ಬಹುತೇಕ ಮೂಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಸ್ಲಂನಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡು ಹಕ್ಕುಪತ್ರ ಸಿಗದೆ ಇರುವವರಿಗೆ 94 ಸಿಸಿ, ಅಕ್ರಮಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಉಷಾ ಎನ್.ಮಾತನಾಡಿ, ‘ಸಚಿವರ ಸೂಚನೆ ಮೇರೆಗೆ ಅಗತ್ಯ  ಕೊಳೆಗೇರಿಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿವಿಧ ವಾರ್ಡ್‌ಗಳಲ್ಲಿ ಸ್ಲಂಗಳಲ್ಲಿ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಗರಸಭಾಸದಸ್ಯ ಎಸ್.ಎಲ್.ಮಂಜುನಾಥ್, ‘ಹಿಂದಿನಿಂದಲೂ ಗೋಪಾಲಗೌಡ ನಗರ ಭಾಗಕ್ಕೆ ಕುಡಿಯುವ ನೀರು, ವಿದ್ಯುತ್, ಶಾಲೆಯನ್ನು ಸ್ಥಾಪಿಸಲು ಕಾಗೋಡು ತಿಮ್ಮಪ್ಪ ಅವರು ಹೆಚ್ಚಿನ ಒತ್ತು ನೀಡಿದ್ದಾರೆ. ಇದರ ಜೊತೆಗೆ ಸಿದ್ದೇಶ್ವರ ಕಾಲೊನಿಗೆ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಚಿವರು ಹೆಚ್ಚಿನ ಅನುದಾನ ನೀಡಬೇಕು’ ಎಂದು ಕೋರಿದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜೂರ್ ಅಲಿ ಖಾನ್, ಸದಸ್ಯರಾದ ತೀ.ನ.ಶ್ರೀನಿವಾಸ್, ಜಿ.ಕೆ.ಭೈರಪ್ಪ, ಪರಿಮಳಾ, ಗ್ರೇಸಿ ಡಯಾಸ್, ಪಸಿಹಾ ಬಾನು, ನಗರಸಭೆ ಪ್ರಭಾರಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಶ್ರೀಪಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT