ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ

Last Updated 16 ಜನವರಿ 2017, 5:15 IST
ಅಕ್ಷರ ಗಾತ್ರ

ಗೌರಿಬಿದನೂರು: ‘ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗೆ ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿ ಮಹತ್ವದ್ದಾಗಿದೆ’ ಎಂದು ಬೆಂಗಳೂರಿನ ಆರ್.ವಿ. ಎಂಜಿನಿಯರ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್. ಬಾಲ ಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಎಂಎಸ್ಎಸ್ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು  ಇತ್ತೀಚೆಗೆ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ‘ಗುಣಾತ್ಮಕ ಶಿಕ್ಷಣ ನೀಡುವುದರಿಂದ ಮಕ್ಕಳ ವ್ಯಕಿತ್ವ ವಿಕಸನ ಹಾಗೂ ಮಾನವೀಯ ಮೌಲ್ಯಗಳು ವೃದ್ಧಿಯಾ ಗಲು ಸಹಕಾರಿಯಾಗಲಿದೆ’ ಎಂದು ಅವರು ಹೇಳಿದರು.  

‘ಮಕ್ಕಳಲ್ಲಿ ಉತ್ತಮ ಗುಣಗಳನ್ನು ಬಾಲ್ಯದಿಂದಲೇ ಬೆಳೆಸುವುದರಿಂದ ಭವಿಷ್ಯದಲ್ಲಿ ಅವರು ಉತ್ತಮ ಪ್ರಜೆ ಗಳಾಗುವರು. ಇದನ್ನು ಮನಗಂಡು ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿ ಗಳಲ್ಲಿ ಮೌಲ್ಯಗಳನ್ನು ಬಿತ್ತಬೇಕು’ ಎಂದು ಅವರು ಸಲಹೆ ನೀಡಿದರು. ‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ’ ಎಂದರು.

ಶಾಲೆ ಅಧ್ಯಕ್ಷ ಎಚ್.ಎನ್. ಪ್ರಕಾಶ್ ರೆಡ್ಡಿ ಮಾತನಾಡಿದರು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು.

ಪುರಸಭೆ ಅಧ್ಯಕ್ಷ ಕಲೀಂ ಉಲ್ಲಾ, ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಮೀಳಾ, ಪುರಸಭೆ ಸದಸ್ಯ ಚಿದಾನಂದಗುಪ್ತ, ಶಾಲೆಯ ಆಡಳಿತ ಮಂಡಳಿ ಕಾರ್ಯ ದರ್ಶಿ ಪಠಾಣ್ ಸೈಪುಲ್ಲಾ, ಡಿ.ಎನ್. ವೆಂಕಟರೆಡ್ಡಿ, ಪಠಾಣ್ ರಹಮತ್ತುಲ್ಲಾ, ಶಿಕ್ಷಕ ರಾಜಾ ಹೊನ್ನಪ್ಪನಾಯಕ, ನರಸಿಂಹಮೂರ್ತಿ, ಅಮೀನ್ ನೂರೈನ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT