ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮೇಶ್ವರರ ತತ್ವಾದರ್ಶ ಪಾಲಿಸಿ

ಸಿದ್ದರಾಮೇಶ್ವರ ಜಯಂತಿಯಲ್ಲಿ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ
Last Updated 16 ಜನವರಿ 2017, 6:48 IST
ಅಕ್ಷರ ಗಾತ್ರ

ಯಾದಗಿರಿ: ‘ಸಿದ್ದರಾಮೇಶ್ವರರ ತತ್ವಾದರ್ಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಶಾಸಕ ಡಾ.ಎ.ಬಿ.ಮಾಲಕರೆಡ್ಡಿ  ಹೇಳಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

‘ಸಿದ್ಧರಾಮೇಶ್ವರ ಅವರು ಸತ್ಪುರುಷರು ಹಾಗೂ ಕರ್ಮಯೋಗಿಗಳಾಗಿದ್ದರು. ಅಂತಹ ಮಹಾಪುರುಷನ ಸ್ಮರಣೆ ಇಂದಿಗೂ ಪ್ರಸ್ತುತ’ ಎಂದರು.
ಸಿದ್ಧರಾಮೇಶ್ವರ 12 ನೇ ಶತಮಾನದಲ್ಲಿ ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಅವರ ಸಮಕಾಲೀನರಾಗಿದ್ದರು. ಮನುಕುಲಕ್ಕೆ ಅವರು ಸಲ್ಲಿಸಿದ ಸೇವೆ ಬಹಳ ಪ್ರಮುಖವಾಗಿದೆ’ ಎಂದು ಶ್ಲಾಘಿಸಿದರು.

ಉಪನ್ಯಾಸಕ ಗುರುಪ್ರಸಾದ ವೈದ್ಯ ವಿಶೇಷ ಉಪನ್ಯಾಸ ನೀಡಿ,‘ಸಿದ್ದರಾಮೇಶ್ವರರು ವಚನಕಾರರಾಗಿದ್ದರು. ಕೆರೆ–-ಬಾವಿಗಳನ್ನು ಕಟ್ಟಿಸುವ ಮೂಲಕ ಜನಮನದಲ್ಲಿ ನೆಲೆಸಿದ್ದರು. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ಎಂದರು.
 
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಮರಡ್ಡಿಗೌಡ ತಂಗಡಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಉಪ ವಿಭಾಗಾಧಿಕಾರಿ ಡಾ.ಜಗದೀಶ ನಾಯಕ, ನಗರಸಭೆ ಸದಸ್ಯ ನಾಗಪ್ಪ ಬೆನಕಲ್, ಭೋವಿ ಸಮಾಜದ ಮುಖಂಡ ನಾಗಪ್ಪ  ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ದೂರದರ್ಶನ ಮತ್ತು ಆಕಾಶವಾಣಿ ಕಲಾವಿದ ಚಂದ್ರಶೇಖರ ಗೋಗಿ ತಂಡ ನಾಡಗೀತೆ ಹಾಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಾರುತಿ ಹುಜರತಿ ಸ್ವಾಗತಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರು ವಂದಿಸಿದರು. ಅಮರಯ್ಯಸ್ವಾಮಿ ಜಾಲಿಬೆಂಚಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT