ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿದ್ದರಾಮರ ವಚನ ಎಂದೆಂದಿಗೂ ಪ್ರಸ್ತುತ’

ಭೋವಿ ವಡ್ಡರ ಸಮುದಾಯ ಭವನಕ್ಕೆ ₹ 10 ಲಕ್ಷ ಅನುದಾನ: ಶಾಸಕ ವಜ್ಜಲ ಘೋಷಣೆ
Last Updated 16 ಜನವರಿ 2017, 8:09 IST
ಅಕ್ಷರ ಗಾತ್ರ

ಲಿಂಗಸುಗೂರು: ‘12ನೇ ಶತಮಾನದಲ್ಲಿ ಶರಣ ಚಳವಳಿಯಲ್ಲಿ ಸಿದ್ದರಾಮೇಶ್ವರ ಶಿವಯೋಗಿಗಳು ಸಮಾಜದಲ್ಲಿ ಮಹಿಳೆಯರು ಮತ್ತು ಕೂಲಿ ಕಾರ್ಮಿಕರ ಬಗ್ಗೆ ಬರೆದಿರುವ ವಚನಗಳು ಇಂದಿಗೂ ಪ್ರಸ್ತುತ’ ಎಂದು ಉಪ ವಿಭಾಗಾಧಿಕಾರಿ ದಿವ್ಯಾಪ್ರಭು ಹೇಳಿದರು.
ಪಟ್ಟಣದಲ್ಲಿ ಭಾನುವಾರ ಸಿದ್ದರಾ­ಮೇಶ್ವರ ಶಿವಯೋಗಿಗಳ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯ  ಹಿರಿಮೆ ಹೆಚ್ಚಿಸಲು ಆಗಾಗ ಜನಿಸಿ ಬಂದಿರುವ ದಾರ್ಶನಿಕರು, ಶರಣರು, ಮಹಾನ್‌ ನಾಯಕರ ಕೊಡುಗೆ ಅಪಾರ. ಅಂಥವರಲ್ಲಿ ಸಿದ್ದರಾಮ ಶಿವಯೋಗಿ­ಗಳೂ ಆದರ್ಶನೀಯ ಬದುಕು ನಡೆಸಿ ದ್ದಾರೆ. ಆ ಮೂಲಕ ದೊಡ್ಡ ಪರಂಪರೆ ಬಿಟ್ಟು ಹೋಗಿದ್ದಾರೆ’ ಎಂದರು.
ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಶಶಿಕಾಂತ ಕಾಡ್ಲೂರು ಉಪನ್ಯಾಸ ನೀಡಿದರು.
ಶಾಸಕ ಮಾನಪ್ಪ ವಜ್ಜಲ ಮಾತ­ನಾಡಿ, ‘ಸಿದ್ದರಾಮೇಶ್ವರ ಶಿವಯೋಗಿಗಳ ಕುಲಬಾಂಧವರಾದ ಭೋವಿ ವಡ್ಡರು ಮೃಧು ಸ್ವಭಾವದವರು. ತಮ್ಮ ಕ್ಷೇತ್ರದಲ್ಲಿ ಬೋವಿ ವಡ್ಡರ ಸಮಾಜದ ಸಮು­ದಾಯ ಭವನ ನಿರ್ಮಾಣಕ್ಕೆ ₹ 10 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.
ಸಾಧಕರಿಗೆ ಸನ್ಮಾನ: ಸಮಾರಂಭ­ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಯನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತಾ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಖಾದರಪಾಷ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಶರಣಬಸಪ್ಪ ಗುಡದ­ನಾಳ, ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ  ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಮುದಗಲ್‌, ತಹಶೀಲ್ದಾರ್‌ ಶಿವಾನಂದ ಸಾಗರ್‌, ತಾಲ್ಲೂಕು ಪಂಚಾ ಯಿತಿ ಕಾರ್ಯನಿರ್ವಾಹಕ ಅಧಿ­ಕಾರಿ ಬಾಬು ರಾಠೋಡ ಉಪಸ್ಥಿತರಿದ್ದರು.
ಭಾವಚಿತ್ರದ ಭವ್ಯ ಮೆರವಣಿಗೆ:  ತಾಲ್ಲೂಕು ಆಡಳಿತ, ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗ ದಲ್ಲಿ ಶನಿವಾರ ಪಟ್ಟಣದಲ್ಲಿ ಸಿದ್ದರಾಮ ಶಿವಯೋಗಿ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು.
ಸರ್ಕಾರಿ ಜೂನಿಯರ್‌ ಕಾಲೇಜು ಆವರಣದಲ್ಲಿ ತೆರೆದ ಅಲಂಕೃತ ವಾಹನದಲ್ಲಿ ಶಿವಯೋಗಿಗಳ ಭಾವಚಿತ್ರ ಅನಾವರಣಗೊಳಿಸಿ, ಪೂಜೆ ಸಲ್ಲಿಸುತ್ತಿ­ದ್ದಂತೆ ಮೆರವಣಿಗೆ ಆರಂಭಗೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಾಜಾ ಭಜಂತ್ರಿ, ಜಯಘೋಷಗಳ ಮಧ್ಯೆ ಮೆರವಣಿಗೆ ಸಾಗಿ ಬಂದಿತು.
ಶಕ್ತಿನಗರ ವರದಿ: ಯರಗುಂಟ ಗ್ರಾಮದಲ್ಲಿ ಭಾನುವಾರ ಭೋವಿ ಸಮಾಜ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಸಗಮಕುಂಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಂಗಪ್ಪ ಯರಗುಂಟ ಅವರು ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಪಾಲಪ್ಪ, ತಿಮ್ಮಪ್ಪ, ಮಾಳಿಂಗಪ್ಪ, ಮಹಾದೇವ ಇದ್ದರು.
ಮಸ್ಕಿ ವರದಿ: ಇಲ್ಲಿಯ ಶಾಸಕರ ಕಚೇರಿ ಸೇರಿದಂತೆ ವಿವಿಧೆಡೆ ಭಾನುವಾರ ಸಿದ್ದರಾಮೇಶ್ವರರ ಜಯಂತಿ ಆಚರಿಸ ಲಾಯಿತು. ಶಾಸಕರ ಕಚೇರಿಯಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪಗೌಡ ಪಾಟೀಲ ಸಿದ್ದರಾ ಮೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಕಾಂಗ್ರೆಸ್‌ ಪಕ್ಷದ ನಗರ ಘಟಕದ ಅಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ಎಪಿಎಂಸಿ ನಿರ್ದೇಶಕ ಬಸ್ಸಪ್ಪ ಬ್ಯಾಳಿ, ಡಾ. ಬಿ.ಎಚ್‌. ದಿವಟರ್‌, ರಾಜ ನಾಯಕ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಫುರ, ಭೋವಿ ಸಮಾಜ ಮುಖಂಡರಾದ ಸಾರಪ್ಪ ಬಂಗಾಲಿ, ತಿಮ್ಮಣ್ಣ ಗುಡಿಸಲಿ ಇದ್ದರು.
ಪುರಸಭೆಯಲ್ಲಿ ಅಧ್ಯಕ್ಷ ಮೌನೇಶ ಮುರಾರಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಉಪಾಧ್ಯಕ್ಷ ರವಿಕುಮಾರ ಪಾಟೀಲ, ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ, ನೈರ್ಮಲ್ಯ ಅಧಿಕಾರಿ ಶಹನವಾಜ್‌, ಪುರಸಭೆ ಸದಸ್ಯರು, ಸಿಬ್ಬಂದಿ ಇದ್ದರು. ವಿವಿಧ ಕಡೆ ಸಿದ್ದರಾ ಮೇಶ್ವರ ಜಯಂತಿ ಆಚರಿಸಲಾಯಿತು.
ಬಳಗಾನೂರು ವರದಿ: ಪಟ್ಟಣದಲ್ಲಿ ವಿವಿಧ ಶಾಲಾ ಕಾಲೇಜು ಹಾಗೂ ಪಟ್ಟಣ ಪಂಚಾಯಿತಿಯಲ್ಲಿ ಭಾನುವಾರ ಸಿದ್ದರಾಮೇಶ್ವರ ಜಯಂತಿ ಆಚರಿಸ ಲಾಯಿತು. ಇಲ್ಲಿನ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕ ಅಮರನಾಥ ಹಳ್ಳೂರು ಅವರು ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ  ಜಯಂತಿ ಆಚರಿಸಿದರು.
ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಹನುಮಂತಪ್ಪ ಸಿದ್ದರಾಮೇಶ್ವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು. ಮುಖ್ಯಾಧಿಕಾರಿ ಫಿರೋಜ್ ಖಾನ್, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT