ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರದ್ದು

ಆಗ್ನೇಯ ಶಿಕ್ಷಕರ ಕೇತ್ರದ ಚುನಾವಣೆ: ಪೂರ್ವಭಾವಿ ಸಭೆಯಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
Last Updated 17 ಜನವರಿ 2017, 6:59 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಜಿಲ್ಲೆಯ ಪಕ್ಷದ ಎಲ್ಲ ಮುಖಂಡರದ್ದಾಗಿದೆ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪಿ.ಆರ್.ಬಸವರಾಜ್ ಪರ ನಾಳೆಯಿಂದಲೇ ಕಾರ್ಯಕರ್ತರು ಶಿಕ್ಷಕರ ಬಳಿ ಹೋಗಿ ಮತಯಾಚನೆಯಲ್ಲಿ ತೊಡಗಬೇಕು’  ಎಂದರು.

‘ಬಿಜೆಪಿಯಿಂದ ಗೆದ್ದು ಹೋದವರು ಮಾತ್ರ ವಿಧಾನ ಪರಿಷತ್‌ನಲ್ಲಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ಕುರಿತು ಹೆಚ್ಚು ಚರ್ಚಿಸುತ್ತಾರೆ ಎಂಬು ದನ್ನು ಮತಯಾಚನೆಗೆ ಹೋದಂತ ಸಂದರ್ಭದಲ್ಲಿ ಶಿಕ್ಷಕರಿಗೆ ಮತ್ತು ಪದವೀಧರರಿಗೆ ಮನವರಿಕೆ ಮಾಡಿ ಕೊಡಬೇಕು’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ‘ಈ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಇದೆ ಎಂಬ ಸಂದೇಶ ರಾಜ್ಯಕ್ಕೆ ರವಾನೆ ಯಾಗುವ ರೀತಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಕೆಲಸ ಮಾಡಬೇಕಿದೆ. ಜಿಲ್ಲೆಯಲ್ಲಿ 4155 ಮತಗಳಿದ್ದು, ಕಳೆದ ಬಾರಿಯ ಚುನಾ ವಣೆ ಗಿಂತ ಈ ಬಾರಿ ಮತದಾರರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಿದ್ದಾರೆ’ ಎಂದರು.

‘ನಗರದಲ್ಲಿ 1418, ಚಳ್ಳಕೆರೆ- 836, ಹಿರಿಯೂರು- 607, ಹೊಳಲ್ಕೆರೆ 453, ಹೊಸದುರ್ಗ- 559, ಮೊಳಕಾಲ್ಮುರು- 220 ಮತದಾರರಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿ ಮತದಾರರ ಸಂಖ್ಯೆ ಕಡಿಮೆಯಾಗಿದೆ. ತುಮಕೂರು ಜಿಲ್ಲೆ ಬಿಟ್ಟರೆ, ನಮ್ಮ ಜಿಲ್ಲೆಯಲ್ಲಿಯೇ ಅಧಿಕ ಮತದಾರರಿದ್ದು, ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು’ ಎಂದರು.

ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿ, ‘ರಾಜ್ಯದಲ್ಲಿ ಭೀಕರ ಬರದ ಸಮಸ್ಯೆ ಎದುರಾಗಿದ್ದರೂ ಆಡಳಿತರೂಢ ಕಾಂಗ್ರೆಸ್ ಮುಖಂಡರು ರೈತರ ನೆರವಿಗೆ ಧಾವಿಸುತ್ತಿಲ್ಲ. ಜಾನುವಾರಿಗೆ ಮೇವು, ನೀರಿಲ್ಲ’ ಎಂದರು.

‘ಇಲ್ಲಿಯವರೆಗೂ ಕೊರೆಸಿರುವ ಕೊಳವೆ ಬಾವಿಗಳಿಗೆ ಹಣ ನೀಡದೆ ಬಾಕಿ ಉಳಿಸಿಕೊಂಡಿರುವ ಕಾರಣ ಹೊಸದಾಗಿ ಕೊಳವೆಬಾವಿ ಕೊರೆಯಲು ಯಾರೂ ಮುಂದೆ ಬರುತ್ತಿಲ್ಲ.  ಸಿಎಂ ಸಿದ್ದ ರಾಮಯ್ಯ ಅವರ ವೈಫಲ್ಯ, ಪ್ರಧಾನಿ ಮೋದಿ ಅವರ ಜನಪರ ಯೋಜನೆ ಗಳನ್ನು ಶಿಕ್ಷಕರಿಗೆ ತಿಳಿಸುವ ಮೂಲಕ ಈ  ಬಿಜೆಪಿ ಅಭ್ಯರ್ಥಿ ಯನ್ನು  ಗೆಲ್ಲಿಸಬೇಕು ಎಂದು ಕೋರಿದರು.

ಮಾಜಿ ಶಾಸಕರಾದ ಪಿ.ರಮೇಶ್, ಆರ್.ರಾಮಯ್ಯ, ಮುಖಂಡರಾದ ಎಂ.ಪಿ.ಗುರುರಾಜ್, ವೆಂಕಟಸ್ವಾಮಿ, ಮಲ್ಲಿಕಾರ್ಜುನ್, ಮುರುಳಿ, ರತ್ನಮ್ಮ, ನಾಗರಾಜ್‌ಬೇಂದ್ರೆ, ದಗ್ಗೆ ಶಿವಪ್ರಕಾಶ್, ಜೈಪಾಲ್, ಶ್ಯಾಮಲಾ, ಪಿ.ಲೀಲಾಧರ ಠಾಕೂರ್, ಸುರೇಶ್‌  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT