ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯವಂತ ಸಮಾಜದಿಂದ ಅಭಿವೃದ್ಧಿ

ಜಿಲ್ಲಾ ಮಟ್ಟದ ಶ್ರಮದಾನ ಕಾರ್ಯಕ್ರಮ: ಉಮಾಕಾಂತ್ ಅಭಿಮತ
Last Updated 17 ಜನವರಿ 2017, 9:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ದೇಶ ಅಭಿವೃದ್ಧಿ ಸಾಧಿಸಬೇಕಾದರೆ ಆರೋಗ್ಯವಂತ ಸಮಾಜ ಬಹುಮುಖ್ಯ ಪಾತ್ರವಹಿಸುತ್ತದೆ. ಹೀಗಾಗಿ ಪ್ರತಿ ನಾಗರಿಕರು ತಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿ ಕೊಳ್ಳಲು ಆದ್ಯತೆ ನೀಡಬೇಕು’ ಎಂದು ನಗರಸಭೆ ಆಯುಕ್ತ ಉಮಾಕಾಂತ್‌ ಅಭಿಪ್ರಾಯಪಟ್ಟರು.

‘ರಾಷ್ಟ್ರೀಯ ಯುವ ಸಪ್ತಾಹ’ದ ಭಾಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉನ್ನತ ಶಿಕ್ಷಣ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಸಹಯೋಗ ದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿ ಸಿದ್ದ ‘ಜಿಲ್ಲಾ ಮಟ್ಟದ ಶ್ರಮದಾನ ಕಾರ್ಯಕ್ರಮ’ದಲ್ಲಿ  ಮಾತನಾಡಿದರು.

‘ದೇಶದ ಪ್ರಗತಿ ಯುವಜನರನ್ನು ಅವಲಂಬಿಸಿದೆ. ಅಭಿವೃದ್ಧಿಗೆ ಪೂರಕ ವಾದ ಪ್ರತಿ ಚಟುವಟಿಕೆಗಳಲ್ಲಿ ಯುವ ಪೀಳಿಗೆ ಭಾಗವಹಿಸುವುದು ಮುಖ್ಯ. ಆರೋಗ್ಯವಂತ ದೇಶ ಕಟ್ಟಲು ಇವತ್ತು ನಾವೆಲ್ಲರೂ ಸ್ವಚ್ಛತೆಗೆ  ಆದ್ಯತೆ ನೀಡ ಬೇಕು. ವಿದ್ಯಾರ್ಥಿಗಳು ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ’ ಎಂದರು.

‘ನಗರ ಸಭೆ ಸ್ವಚ್ಛ ಭಾರತ ಆಂದೋ ಲನದ ಭಾಗವಾಗಿ ಈಗಾಗಲೇ ನಗರದಾ ದ್ಯಂತ ಸ್ವಚ್ಛತಾ ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಳ್ಳುತ್ತಿದೆ’ ಎಂದರು.

ಪ್ರಾಂಶುಪಾಲ ಎಲ್.ನಾರಾಯಣ ಸ್ವಾಮಿ, ‘ಸ್ವಚ್ಛತೆ ನಮ್ಮ ವ್ಯಕ್ತಿತ್ವ ಸೂಚಿಸುತ್ತದೆ. ವಿದ್ಯಾರ್ಥಿಗಳು ಇತರರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದಾಗ ಶಿಕ್ಷಣ ಪಡೆದದ್ದು ಸಾರ್ಥಕವಾಗುತ್ತದೆ’ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ಗಿಡವನ್ನು ನೆಡಲಾಯಿತು. ಬಳಿಕ ಎಲ್ಲಾ ತಾಲ್ಲೂಕುಗಳಿಂದ ಬಂದಿದ್ದ ಸುಮಾರು 150 ವಿದ್ಯಾರ್ಥಿಗಳು 13 ತಂಡಗಳಾಗಿ 12, 13ನೇ ವಾರ್ಡ್‌ಗಳಿಗೆ ತೆರಳಿ ರಸ್ತೆಯಲ್ಲಿದ್ದ ತಾಜ್ಯವನ್ನು ಸ್ವಚ್ಛಗೊಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಲ್.ನಾಗರಾಜು, ಇತಿಹಾಸ ವಿಭಾಗದ ಮುಖ್ಯಸ್ಥ ಗಂಗರಾಜು ನಾಯಕ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಬಿ.ಎಲ್.ವೆಂಕಟರಾಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸಿಂಧೂರ್, ಪದ್ಮಮ್ಮ, ನಗರಸಭೆ ಆರೋಗ್ಯ ನಿರೀಕ್ಷಕಿಯರಾದ ಶ್ರೀದೇವಿ, ಕೆ.ಕೆ.ಮಂಜುಳಾ, ರೇಖಾ, ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜ ನಾಧಿಕಾರಿಗಳಾದ ಸಿ.ರಂಗಸ್ವಾಮಿ, ಕಲ್ಯಾಣ್ ರಾಜ್  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT