ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ವಿದ್ಯುತ್‌ಗೆ ಭಾರಿ ಬೇಡಿಕೆ

Last Updated 17 ಜನವರಿ 2017, 9:20 IST
ಅಕ್ಷರ ಗಾತ್ರ

ತುಮಕೂರು: ‘ಭಾರತದಲ್ಲಿ ವಿದ್ಯುತ್‌ಗೆ ಭಾರಿ ಬೇಡಿಕೆ ಇದೆ’ ಎಂದು ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಶಿವಕುಮಾರ ಆರಾಧ್ಯ ಹೇಳಿದರು.

ಸಿದ್ಧಾರ್ಥ ತಾಂತ್ರಿಕ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ವಿಭಾಗವು ಈಚೆಗೆ ಆಯೋಜಿಸಿದ್ದ ‘ಹೈ ವೋಲ್ಟೇಜ್ ನೇರ ವಿದ್ಯುತ್ ಸರಬರಾಜು ತಾಂತ್ರಿಕತೆ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

‘ವಿದೇಶಗಳಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಅತಿ ಹೆಚ್ಚಾಗಿದ್ದರೂ ಸಹ ಅಲ್ಲಿ ವಿದ್ಯುತ್ ಬಳಕೆ ಕಡಿಮೆ ಪ್ರಮಾಣದಲ್ಲಿದೆ. ಆದರೆ, ನಮ್ಮ ದೇಶದಲ್ಲಿ ತದ್ವಿರುದ್ಧವಾಗಿದೆ’ ಎಂದು ಅವರು ತಿಳಿಸಿದರು.

ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಹಾಗೂ ಡೀನ್ ಡಾ.ಬಿ.ರಾಜೇಶ್ ಕಾಮತ್ ಮಾತನಾಡಿ, ‘ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ರಾಷ್ಟ್ರಿಯ ಮತ್ತು ಅಂತರರಾಷ್ಟ್ರಿಯ ಮಟ್ಟದ ವಿಚಾರ ಸಂಕಿರಣ ಮತ್ತು ಕಾರ್ಯಗಾರಗಳಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT