ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಚುನಾವಣೆಯಲ್ಲಿ ಅಕ್ರಮ: ಆರೋಪ

Last Updated 18 ಜನವರಿ 2017, 4:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇತ್ತೀಚೆಗೆ ನಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿ ಎಂಸಿ) ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಕ್ರಮ ಎಸಗಿದೆ’ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಪಿಎಂಸಿಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸುವ ಉದ್ದೇಶದಿಂದ ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿಯೂ ಗೆಲ್ಲದಂತೆ ಸಂಚು ರೂಪಿಸಲಾಗಿದೆ. ಅಧಿಕಾರಿಗಳು ಕೂಡ ಶಾಸಕರು ಮತ್ತು ಅವರ ಬೆಂಬಲಿಗರ ಆಣತಿಯಂತೆ ಕೆಲಸ ನಿರ್ವಹಿಸುವ ಮೂಲಕ ಇದಕ್ಕೆ ಸಾಥ್ ನೀಡಿದ್ದಾರೆ’ ಎಂದು ದೂರಿದರು.

‘ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಮೋಹನ್ ಅವರು ಚುನಾವಣಾ ಅಕ್ರಮಗಳನ್ನು ತಡೆಗಟ್ಟು ವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಚುನಾವಣೆ ಘೋಷಣೆಯಾದ ದಿನದಿಂ ದಲೂ ನಾವು ಅವರನ್ನು ಬದಲಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜ ನವಾಗಲಿಲ್ಲ. ಚುನಾವಣಾಧಿಕಾರಿ ಅವರು ಚುನಾವಣೆ ಸಂದರ್ಭದಲ್ಲಿ  ಅಕ್ರಮ ನಡೆಯಲು ಅನುಕೂಲ ಮಾಡಿ ಕೊಟ್ಟಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್ ಮಾತನಾಡಿ, ‘ಸದ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ತಾಲ್ಲೂಕಿನಾದ್ಯಂತ ಶಾಸಕರೇ ಅಧ್ಯಕ್ಷ ರಾಗಿರುವ ಸಾಯಿಕೃಷ್ಣ ಚಾರಿ ಟೆಬಲ್ ಟ್ರಸ್ಟ್‌ ವತಿಯಿಂದ ರಂಗೋಲಿ ಸ್ಪರ್ಧೆ ನಡೆಸಲಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆ. ಈ ಬಗ್ಗೆ ಚುನಾವಣಾ ಆಯೋಗ  ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಪ್ರಾಥಮಿಕ, ಪ್ರೌಢಶಾಲೆಗಳ ಆವರಣಗಳಲ್ಲಿ ಪಠೇತ್ಯರವಾಗಿ ಖಾಸಗಿ ಯವರು ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಿಷೇಧಿಸಿದೆ. ಆದರೂ ಬಿ.ಬಿ ರಸ್ತೆಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆ ಪರೀಕ್ಷೆ ನಡೆಯುತ್ತಿತ್ತು. ಇಷ್ಟೆಲ್ಲ ಕಾನೂನು ಉಲ್ಲಂಘನೆಯಾದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ‘ಚುನಾವಣೆ ಎದುರಿಸಲು ಅಕ್ರಮ ಮಾರ್ಗ ಕಂಡುಕೊಂಡಿದ್ದ ಕಾಂಗ್ರೆಸ್‌ ನವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮತದಾರರ ಪಟ್ಟಿಯಲ್ಲಿ ಬೋಗಸ್ ಹೆಸರುಗಳನ್ನು ಸೇರಿಸಿದ್ದಾರೆ.

ಈ ಹಿಂದೆ ಅನೇಕ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಪೈಪೋಟಿ ನೀಡಿದ್ದ ಜೆಡಿಎಸ್ ಎಪಿಎಂಸಿ ಯಲ್ಲಿ ಈ ರೀತಿ ಸೋಲಲು ಕಾರಣ ಏನು ಎನ್ನುವ ಬಗ್ಗೆ ತನಿಖೆ ನಡೆಸಿದರೆ ಸತ್ಯ ಬಯಲಾಗುತ್ತದೆ’ ಎಂದು ತಿಳಿಸಿದರು. ಜೆಡಿಎಸ್ ಮುಖಂಡರಾದ ಲಾಯರ್ ನಾರಾಯಣಸ್ವಾಮಿ, ಕೊಳ ವನಹಳ್ಳಿ ಮುನಿರಾಜು,ಶಿವಪ್ಪ, ತಳವಾರ ಶ್ರೀಧರ್ ಮತ್ತಿತರರು  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT