ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೌಡಯ್ಯ ಜಯಂತಿ, ಗಣರಾಜ್ಯೋತ್ಸವ: ಸಭೆ

ಅರ್ಥಪೂರ್ಣ ಆಚರಣೆ: ಸಭೆಯಲ್ಲಿ ನಿರ್ಧಾರ
Last Updated 18 ಜನವರಿ 2017, 5:23 IST
ಅಕ್ಷರ ಗಾತ್ರ

ಕುಷ್ಟಗಿ: ಪಟ್ಟಣದಲ್ಲಿ ಜ.  21ರಂದು ಶರಣ ಅಂಬಿಗರ ಚೌಡಯ್ಯ ಹಾಗೂ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ  ಆಚರಿಸಲು ತಹಶೀಲ್ದಾರ್‌ ಎಂ.ಗಂಗಪ್ಪ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ  ಸಭೆಯಲ್ಲಿ ನಿರ್ಧರಿಸಲಾಯಿತು.

ಗಣರಾಜ್ಯೋತ್ಸವ: ಗಣರಾಜ್ಯೋತ್ಸವ ಕುರಿತು ನಡೆದ ಚರ್ಚೆಯಲ್ಲಿ ತಹಶೀಲ್ದಾರ್‌ ಎಂ.ಗಂಗಪ್ಪ, ಪಟ್ಟಣದ ಎಲ್ಲ ಶಾಲೆ ಕಾಲೇಜುಗಳಲ್ಲಿ ಬೆಳಿಗ್ಗೆ 9 ಗಂಟೆ ಒಳಗಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಮಾರಂಭ ನಡೆಯುವ ತಾಲ್ಲೂಕು ಕ್ರೀಡಾಂಣಕ್ಕೆ  ಆಗಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಚೌಡಯ್ಯ ಜಯಂತಿ: ಅದೇ ರೀತಿ ಜ 21ರಂದು ಶಿವಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಗಂಗಾಮತಸ್ಥ ಸಮುದಾಯದ ಪ್ರಮುಖರ ಆಶಯದಂತೆ ಬೆಳಿಗ್ಗೆ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಮೆರವಣಿಗೆ ನಡೆಸುವುದು.

ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ವಿಶೇಷ ಉಪನ್ಯಾಸ, ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಹಶೀಲ್ದಾರ್‌ ಎಂ.ಗಂಗಪ್ಪ ವಿವರಿಸಿದರು.

ಎಲ್ಲರಿಗೂ ಮಾಹಿತಿ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ಪ ಸುಬೇದಾರ ಅವರಿಗೆ ಸೂಚಿಸಿದರು.

ಗ್ರೇಡ್‌–2 ತಹಶೀಲ್ದಾರ್‌ ಶ್ರೀನಿವಾಸಮೂರ್ತಿ, ಶಿರಸ್ತೆದಾರ ರಜನಿಕಾಂತ, ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಪ್ಪ ಪತ್ತಾರ, ದೈಹಿಕ ಶಿಕ್ಷಣಾಧಿಕಾರಿ ವೆಂಕನಗೌಡ ದಾದ್ಮಿ, ಅಕ್ಷರದಾಸೋಹ ಯೋಜನೆ ಅಧಿಕಾರಿ ವಿ.ಬಿ.ಉಪ್ಪಿನ, ಡಾ.ರಾಜಕುಮಾರ ಅಭಿಮಾನಿಗಳ ಸಂಘದ ಮುಖಂಡ ಮುತ್ತಣ್ಣ ಬಾಚಲಾಪುರ, ಗಂಗಾಮತ ಸಮಾಜದ ಪ್ರಮುಖರಾದ ಪಂಪಾಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT