ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದುಳಿದ ವರ್ಗ ಅಭಿವೃದ್ಧಿಗೆ 20 ಸಾವಿರ ಕೋಟಿ’

ಬಿ.ಸಿ.ರೋಡ್: ಅಂಬೇಡ್ಕರ್ ಭವನಕ್ಕೆ ಸಚಿವರಿಂದ ಶಿಲಾನ್ಯಾಸ
Last Updated 18 ಜನವರಿ 2017, 5:58 IST
ಅಕ್ಷರ ಗಾತ್ರ

ಬಂಟ್ವಾಳ:  ದೇಶದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶ ಯ ಈಡೇರಿಸುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂ ಗ್ರೆಸ್ ಸರ್ಕಾರವು ಇದೇ ಪ್ರಥಮ ಬಾರಿಗೆ ದಲಿತರು ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ₹ 20ಸಾವಿರ ಕೋಟಿ ಮೊತ್ತದ ಅನುದಾನ ಮೀಸಲಿಟ್ಟಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂ ಕು ಪಂಚಾಯಿತಿ ಕಟ್ಟಡ ಬಳಿ ₹ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿ ರುವ ತಾಲ್ಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮಂಗ ಳವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರವು ಕಳೆದ ವರ್ಷ ನಡೆಸಿದ ಜಾತಿ ಸಮೀಕ್ಷೆ ವರದಿ ಈ ತಿಂಗಳ ಕೊನೆಗೆ ಸಲ್ಲಿಕೆಯಾಗಲಿದ್ದು, ಮುಂದಿನ ಬಜೆಟ್‌ನಲ್ಲಿ ಇದರ ಅನುಷ್ಠಾನಕ್ಕೆ ಪ್ರಯ ತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಇದೇ ವೇಳೆ ಹೋಬಳಿ ಮಟ್ಟದ ಎರಡು ಅಂಬೇಡ್ಕರ್ ಭವನ ಮತ್ತು ಗಡಿ ಪ್ರದೇಶಗಳ ಕಾಮಗಾರಿಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದರು.
ಪ್ರಸಕ್ತ ಸಮಾಜದಲ್ಲಿ ಸಂವಿಧಾನಕ್ಕೆ ಬದ್ಧವಾಗಿ ಜನರಿಗೆ ಮೂಲಸೌಕರ್ಯ ನೀಡುವ ಮೂಲಕ ಜನಪರ ಆಡಳಿತ ನಡೆಸುವುದರ ಜೊತೆಗೆ ಸಾಮಾ ಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರವು ಅಭಿವೃದ್ಧಿಯಲ್ಲಿ ಇಡೀ ರಾಜ್ಯದಲ್ಲಿ ಮುಂ ಚೂಣಿಯಲ್ಲಿದ್ದು, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವಲ್ಲಿ ಸಚಿವ ರೈ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ಬಣ್ಣಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾ ನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರ ಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದ ರಬೆಟ್ಟು, ಜಿಲ್ಲಾ ಪಂಚಾಯಿತಿ ಸದಸ್ಯ ರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಬಿ.ಪದ್ಮಶೇ ಖರ್ ಜೈನ್, ರವೀಂದ್ರ ಕಂಬಳಿ, ಶೇಖರ್ ಕುಕ್ಕೇರಿ, ಮಮತಾ ಎಸ್.ಗಟ್ಟಿ, ಜಯಶ್ರೀ ಕೋಡಂದೂರು, ಮಂಜುಳಾ ಮಾಧವ ಮಾವೆ,

ಮಂಗಳೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮುಹಮ್ಮದ್ ಮೋನು, ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಪದ್ಮನಾಭ ನರಿಂಗಾನ, ಜನಾರ್ದನ ಚೆಂಡ್ತಿಮಾರ್, ಲಕ್ಕಪ್ಪ ಬೆಂಗಳೂರು, ಡಾ. ಜಿ. ಸಂ ತೋಷ್ ಕುಮಾರ್, ಯೋಜನಾ ಸಮನ್ವ ಯಾಧಿಕಾರಿ ಡಾ. ಬಿ. ಎಸ್.ಹೇಮಲತಾ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಪುರಸಭೆ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಮತ್ತಿತರರು ಇದ್ದರು.

ಹೆಚ್ಚುವರಿ ಅನುದಾನ
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮನವಿ ಮೇರೆಗೆ ಇಲ್ಲಿನ ಅಂಬೇಡ್ಕರ್ ಭವನಕ್ಕೆ  ₹1ಕೋಟಿ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು ಮುಂದಿನ ದಿನಗಳಲ್ಲಿ ಈ ಸಮುದಾಯ ಭವನದಲ್ಲಿ ಸರ್ಕಾರಿ ಕಾರ್ಯಕ್ರಮ ಸಹಿತ ಎಲ್ಲಾ ಜನಾಂಗಗಳ ಶುಭ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT