ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಶಕ್ತರಿಗೆ ಬಲ ತುಂಬುವ ಕೆಲಸ ನಿರಂತರವಾಗಿರಲಿ’

Last Updated 18 ಜನವರಿ 2017, 6:00 IST
ಅಕ್ಷರ ಗಾತ್ರ

ಉಡುಪಿ:ಧ್ವನಿ ಇಲ್ಲದವರಿಗೆ ಧ್ವನಿ ನೀಡುವ, ಶಕ್ತಿ ಇಲ್ಲದವರಿಗೆ ಬಲ ತುಂಬುವ ಕೆಲಸವನ್ನು ಮಾಧ್ಯಮಗಳು ನಿರಂತರವಾಗಿ ಮಾಡಬೇಕು ಎಂದು ಮೀನುಗಾರಿಕೆ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್‌ ಹೇಳಿದರು.

ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎನ್‌. ವಿಷ್ಣುವರ್ಧನ ಮಾತನಾಡಿದರು.

ಜೈದೇವ್‌ ಮೋಟಾರ್ಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯ ರಾಮ್ ಸುವರ್ಣ ಮಾತನಾಡಿ, ಸಮಾ ಜದ ಆಗುಹೋಗುಗಳ ಸುದ್ದಿಯನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕಾರ್ಯವನ್ನು ಮಾಧ್ಯಮಗಳು ಮಾಡು ತ್ತಿವೆ. ಎಂತಹ ಸನ್ನಿವೇಶ, ಸಂದರ್ಭ ಇರಲಿ, ಹಾದಿ ಎಷ್ಟೇ ದುರ್ಗಮವಾಗಿರಲಿ ಪತ್ರಕರ್ತರು ಅದನ್ನು ಮೀರಿ ಕೆಲಸ ಮಾಡುತ್ತಾರೆ. ಪತ್ರಕರ್ತರ ಕೆಲಸವೇ ಒಂದು ರೀತಿ ಕ್ರೀಡೆ ಇದ್ದಂತೆ ಎಂದರು. ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯುತ್ತಮ ಸೌಲಭ್ಯಗಳಿದ್ದು, ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಅವರು ಹೇಳಿದರು.

ಕ್ರೀಡಾಕೂಟಕ್ಕೆ ಇಲಾಖೆ ವತಿಯಿಂದ ಮಂಜೂರಾದ ₹50 ಸಾವಿರದ ಚೆಕ್‌ ಅನ್ನು ಪ್ರಮೋದ್ ಮಧ್ವರಾಜ್‌ ಹಸ್ತಾಂತರಿಸಿದರು. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ಕುಮಾರ್ ಶೆಟ್ಟಿ, ಪತ್ರಕರ್ತರಾದ ಜಯಕರ ಸುವರ್ಣ, ಗಣೇಶ್ ಪ್ರಸಾದ್ ಪಾಂಡೇಲು, ನಝೀರ್‌ ಪೊಲ್ಯ, ರಾಜೇಶ್‌ ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT